alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರಾಗ್ತಾರೆ ಸಿ.ಎಂ.? ಸಮೀಕ್ಷೆಯಲ್ಲಿ ಹೀಗಿದೆ ಜನಾಭಿಪ್ರಾಯ

ಇಂಡಿಯಾ ಟುಡೇ –ಕಾರ್ವಿ ನಡೆಸಿದ ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಪೂರ್ವ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂಬ ಮಾಹಿತಿ ಇದೆ.

ಮಾರ್ಚ್ 17 ರಿಂದ ಏಪ್ರಿಲ್ 5 ರ ವರೆಗೆ ರಾಜ್ಯದ 224 ಕ್ಷೇತ್ರಗಳಲ್ಲಿ 27,919 ಮಂದಿಯನ್ನು ಸಂಪರ್ಕಿಸಿ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯಲ್ಲಿ ವಿವಿಧ ಅಭಿಪ್ರಾಯ ವ್ಯಕ್ತವಾಗಿದೆ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂದು ಜನ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಿದ್ಧರಾಮಯ್ಯ ಸಿ.ಎಂ. ಆಗಲಿ ಎಂದು ಶೇ. 33 ರಷ್ಟು ಮಂದಿ ಅಭಿಪ್ರಾಯ ತಿಳಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿ ಎಂದು ಶೇ. 26 ರಷ್ಟು ಮಂದಿ ಹೇಳಿದ್ದಾರೆ. ಶೇ. 21 ರಷ್ಟು ಮಂದಿ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು 10 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದ ಹೇಳಿಕೆ ಪರಿಣಾಮ ಬೀರುತ್ತಾ ಎಂಬ ಪ್ರಶ್ನೆಗೆ ಶೇ. 52 ರಷ್ಟು ಮಂದಿ ಹೌದು ಎಂದು ಹೇಳಿದ್ದು, ಶೇ. 27 ರಷ್ಟು ಮಂದಿ ಇಲ್ಲ ಎಂದು, ಶೇ. 21 ರಷ್ಟು ಮಂದಿ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...