alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯಪುರದಲ್ಲಿ ಮೋದಿ, ಸೋನಿಯಾ ಹೈವೋಲ್ಟೇಜ್ ಪ್ರಚಾರ

ವಿಧಾನಸಭೆ ಚುನಾವಣೆಯ ಪ್ರಚಾರದ ಅಬ್ಬರ ಮುಗಿಲುಮುಟ್ಟಿದೆ. ಮತದಾನ ದಿನ ಸಮೀಪಿಸುತ್ತಿರುವಂತೆಯೇ ಘಟಾನುಘಟಿ ನಾಯಕರು ಬಿರುಗಾಳಿ ಪ್ರಚಾರ ಕೈಗೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಘೋಷಣೆಗೂ ಮೊದಲಿನಿಂದಲೂ ರಾಜ್ಯದಲ್ಲಿ ಪ್ರಚಾರ ನಡೆಸಿದ್ದು, ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ದಾಖಲೆ ಬರೆದಿದ್ದಾರೆ.

ಸೋನಿಯಾಗಾಂಧಿ ಅವರು ಮೇ 8 ರಂದು ವಿಜಯಪುರದಲ್ಲಿ ಪ್ರಚಾರ ಕೈಗೊಂಡಿದ್ದು, ಅದೇ ದಿನ ಪ್ರಧಾನಿ ಮೋದಿ ಪ್ರಚಾರ ನಿಗದಿಯಾಗಿದೆ. ಸಚಿವ ಎಂ.ಬಿ ಪಾಟೀಲ್ ಪ್ರತಿನಿಧಿಸುತ್ತಿರುವ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಸಾರವಾಡದಲ್ಲಿ ಮೋದಿ, ಸೋನಿಯಾಗಾಂಧಿ ಪ್ರಚಾರ ನಡೆಸಲಿದ್ದಾರೆ.

ಮೇ 8 ರಂದು ಬೆಳಿಗ್ಗೆ 11 ಗಂಟೆಗೆ ಮೋದಿ ಬಿ.ಜೆ.ಪಿ. ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದು, ಮಧ್ಯಾಹ್ನ 3 ಗಂಟೆಗೆ ಸೋನಿಯಾಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...