alex Certify
ಕನ್ನಡ ದುನಿಯಾ       Mobile App
       

Kannada Duniya

ವೋಟರ್ ಐಡಿ ಕಾರ್ಡ್ ಅಕ್ರಮ ಸಂಗ್ರಹ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 8000 ಮತದಾರರ ಗುರುತಿನ ಚೀಟಿ ಪ್ರಕರಣ ಮತ್ತೊಂದು ತಿರುವು ಪಡೆದಿದೆ.

ವೋಟರ್ ಐ.ಡಿ. ಪತ್ತೆಯಾದ ನಂತರ ಮಧ್ಯರಾತ್ರಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಾಯಕರು ಆರೋಪ –ಪ್ರತ್ಯಾರೋಪ ನಡೆಸಿದ್ದರು. ಮಧ್ಯರಾತ್ರಿ ಹೈಡ್ರಾಮದ ಬಳಿಕ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಾಯಕರು ಮುಂದಾಗಿದ್ದಾರೆ.

ಜಾಲಹಳ್ಳಿಯ ಶಾರದಾಂಬ ನಗರದ ಎಸ್.ಎಲ್.ವಿ. ಅಪಾರ್ಟ್ ಮೆಂಟ್ ನಲ್ಲಿ ವೋಟರ್ ಐ.ಡಿ. ಕಾರ್ಡ್ ಕಂಡು ಬಂದಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಬಾಡಿಗೆದಾರ ರಾಕೇಶ್ ರಾಜಕೀಯ ಪಕ್ಷವೊಂದರ ಕಾರ್ಯಕರ್ತರೊಂದಿಗೆ ಗುರುತಿಸಿಕೊಂಡಿದ್ದು, ಆತನಿಂದಲೇ ಕೃತ್ಯ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಠಾಣೆ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...