alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ವೋಟ್ ಹಾಕುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದೆ. ಮತದಾನದ ಅವಧಿಯನ್ನು 30 ನಿಮಿಷ ವಿಸ್ತರಿಸಲಾಗಿದೆ.

ಮುಕ್ತ, ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗ, ಮತದಾನದ ಅವಧಿಯನ್ನು ವಿಸ್ತರಿಸಿದೆ. ಈ ಮೊದಲು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ರ ವರೆಗೆ ವೋಟಿಂಗ್ ಮಾಡಲು ಅವಕಾಶ ಇತ್ತು.

ಈ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಅವಧಿಯನ್ನು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6.30 ರ ವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಮತದಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಮತದಾರರು, ಗುರುತಿನ ಚೀಟಿ ಇಲ್ಲದಿದ್ದಲ್ಲಿ ಆಯೋಗ ನಿಗದಿಪಡಿಸಿದ ಬೇರೆ ಗುರುತಿನ ಚೀಟಿ ತೋರಿಸಿ ಮತ ಹಾಕಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...