alex Certify
ಕನ್ನಡ ದುನಿಯಾ       Mobile App
       

Kannada Duniya

ಬಾದಾಮಿಯಲ್ಲಿ ಸಿ.ಎಂ. ಸ್ಪರ್ಧೆ ಗೊಂದಲಕ್ಕೆ ತೆರೆ, ಏಪ್ರಿಲ್ 23 ರಂದು ನಾಮಪತ್ರ

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಈ ಕುರಿತಾಗಿ ಭಾರೀ ಗೊಂದಲ ಮೂಡಿತ್ತು.

ಚಾಮುಂಡೇಶ್ವರಿ ಕ್ಷೇತ್ರ ಸೇಫಲ್ಲ ಎನ್ನುವ ಕಾರಣಕ್ಕೆ ಸಿ.ಎಂ. ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದರೂ, ಬಿ ಫಾರಂ ನೀಡಿಲ್ಲ. ಸಿ.ಎಂ. ಸ್ಪರ್ಧಿಸಿದರೆ ಸ್ಪರ್ಧಿಸಲಿ, ಇಲ್ಲವೇ ತಮಗೇ ಟಿಕೆಟ್ ಕೊಡಬೇಕೆಂದು ಶಾಸಕ ಚಿಮ್ಮನಕಟ್ಟಿ ಅವರು ಪಟ್ಟು ಹಿಡಿದಿದ್ದಾರೆ.

ಸಿ.ಎಂ.ಗೆ ಉತ್ತರ ಕರ್ನಾಟಕದ ಬಾದಾಮಿಯಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಒತ್ತಡ ಕೇಳಿ ಬಂದ ಹಿನ್ನಲೆಯಲ್ಲಿ ಹೈಕಮಾಂಡ್ ಸ್ಪರ್ಧೆಗೆ ಅವಕಾಶ ನೀಡಿದೆ.

ಸಿಎಂ. ಪುತ್ರ ವರುಣಾ ಕ್ಷೇತ್ರದ ಅಭ್ಯರ್ಥಿ ಡಾ. ಯತೀಂದ್ರ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಏಪ್ರಿಲ್ 23 ರಂದು ಸಿ.ಎಂ. ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...