alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರನೇ ಟಿ-20 ಪಂದ್ಯದಲ್ಲಿ ದಾಖಲೆ ಮೇಲೆ ಆಟಗಾರರ ಕಣ್ಣು

ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯನ್ನು ಟೀಂ ಇಂಡಿಯಾ ಕೈವಶ ಮಾಡಿಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ 2 ಗೆಲವು ಸಾಧಿಸಿರುವ ಟೀಂ ಇಂಡಿಯಾ ಮೂರನೇ ಪಂದ್ಯದ ಮೇಲೆ ಕಣ್ಣಿಟ್ಟಿದೆ. ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಇನ್ನೊಂದಿಷ್ಟು ದಾಖಲೆ ಬರೆಯುವ ಸಾಧ್ಯತೆಯಿದೆ.

ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಮೂರನೇ ಟಿ-20 ಪಂದ್ಯದಲ್ಲಿ ಬೌಲರ್ ಜಸ್ಪ್ರೀತ್ ಬುಮ್ರಾ ದಾಖಲೆ ಬರೆಯುವ ಸಾಧ್ಯತೆಯಿದೆ. ಅಂತರಾಷ್ಟ್ರೀಯ ಟಿ-20 ಪಂದ್ಯದಲ್ಲಿ 50 ವಿಕೆಟ್ ಕಬಳಿಸಿ ದಾಖಲೆ ಬರೆಯುವ ಸಾಧ್ಯತೆಯಿದೆ. ಮೂರನೇ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ್ರೆ 50 ವಿಕೆಟ್ ಆಗಲಿದೆ. ಬುಮ್ರಾ ಈವರೆಗೆ 37 ಪಂದ್ಯಗಳನ್ನಾಡಿದ್ದು, 46 ವಿಕೆಟ್ ಪಡೆದಿದ್ದಾರೆ.

ರೋಹಿತ್ ಶರ್ಮಾ ಮುಡಿಗೆ ಇನ್ನೊಂದು ಗರಿ ಸೇರುವ ಸಾಧ್ಯತೆಯಿದೆ. ಉತ್ತಮ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ದಾಖಲೆ ಬರೆಯಲು ಇನ್ನು ನಾಲ್ಕು ಸಿಕ್ಸ್ ಅಗತ್ಯವಿದೆ. ಒಂದು ವೇಳೆ ಮೂರನೇ ಟಿ-20 ಪಂದ್ಯದಲ್ಲಿ ರೋಹಿತ್ ನಾಲ್ಕು ಸಿಕ್ಸ್ ಬಾರಿಸಿದ್ರೆ ಅಂತರಾಷ್ಟ್ರೀಯ ಟಿ-20 ಪಂದ್ಯದಲ್ಲಿ 100 ಸಿಕ್ಸ್ ಬಾರಿಸಿದ ಆಟಗಾರನಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...