
ಇಂದು ಸಾಯಂಕಾಲ ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ ಮ್ಯಾಚ್ ಗೆ ಭಾರೀ ಭದ್ರತೆ ಒದಗಿಸಲಾಗಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಲಿದ್ದು, ಅದಕ್ಕಾಗಿ ಸುಮಾರು 4 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕೆಲ ರಾಜಕೀಯ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲು ಅಥವಾ ಮುಂದೂಡುವಂತೆ ಬೇಡಿಕೆ ಇಟ್ಟಿದ್ದು, ಇದಕ್ಕಾಗಿ ಭದ್ರತೆ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ.
ಸ್ಟೇಡಿಯಂ ಒಳಗೆ ಯಾವುದೇ ಬ್ಯಾನರ್, ಮೊಬೈಲ್ ಪೋನ್, ಕ್ಯಾಮರಾ ಮುಂತಾದವುವನ್ನು ಕೊಂಡೊಯ್ಯದಂತೆ ಸೂಚನೆ ನೀಡಲಾಗಿದ್ದು ಯಾವುದೇ ಅಸಭ್ಯ ಭಾಷೆಯನ್ನು ಬಳಸದಂತೆ ಹೇಳಲಾಗಿದೆ.