alex Certify
ಕನ್ನಡ ದುನಿಯಾ       Mobile App
       

Kannada Duniya

ಐಪಿಎಲ್ ಆನ್ ಲೈನ್ ಟಿಕೆಟ್ ಖರೀದಿಗೆ ಆಧಾರ್! ಕ್ರಿಕೆಟ್ ಅಭಿಮಾನಿಗಳ ಆಕ್ರೋಶ

ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡುವ ಐಪಿಎಲ್ ಪಂದ್ಯಾವಳಿಗಳು ನಡೆಯುತ್ತಿವೆ. ತಮ್ಮ ತಮ್ಮ ನೆಚ್ಚಿನ ತಂಡಗಳ ಪಂದ್ಯಗಳನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದು, ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸಲು ಮುಂದಾಗಿದ್ದಾರೆ.

ಆದರೆ ಆನ್ ಲೈನ್ ನಲ್ಲಿ ಐಪಿಎಲ್ ಟಿಕೆಟ್ ಖರೀದಿಸಬೇಕೆಂದರೆ ಆಧಾರ್ ಮಾಹಿತಿ ನೀಡುವುದು ಕಡ್ಡಾಯವಾಗಿದ್ದು, ಇದು ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಹಾಗೂ ಸರ್ಕಾರೇತರದ ಹಲವು ಸೇವೆಗಳಿಗೆ ಆಧಾರ್ ಕಡ್ಡಾಯ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಹಲವರು ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಯುತ್ತಿರುವಾಗಲೇ ಐಪಿಎಲ್ ಆನ್ ಲೈನ್ ಟಿಕೆಟ್ ಗೆ ಆಧಾರ್ ಕಡ್ಡಾಯ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ.

ಆದರೆ ಐಪಿಎಲ್ ಆಯೋಜಕರು, ಐಪಿಎಲ್ ಟಿಕೆಟ್ ಗಳು ಕಾಳಸಂತೆಯಲ್ಲಿ ಮಾರಾಟವಾಗಬಾರದು ಎನ್ನುವ ಕಾರಣಕ್ಕೆ ಆಧಾರ್ ಮಾಹಿತಿ ಪಡೆಯಲಾಗುತ್ತಿದೆ. ಈ ಮಾಹಿತಿಗಳು ಸಂಪೂರ್ಣ ಸುರಕ್ಷಿತವಾಗಿರಲಿವೆ ಎಂದು ಹೇಳುತ್ತಿದ್ದಾರೆ. ಕ್ರಿಕೆಟ್ ಪ್ರೇಮಿಗಳು ಮಾತ್ರ, ಆನ್ ಲೈನ್ ಟಿಕೆಟ್ ಖರೀದಿಗೆ ಆಧಾರ್ ಕಡ್ಡಾಯ ಮಾಡಿರುವುದು ಸರಿಯಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...