alex Certify
ಕನ್ನಡ ದುನಿಯಾ       Mobile App
       

Kannada Duniya

ಅಮಿರ್ ಖಾನ್ ಗೂ ಇಷ್ಟ ಕ್ರಿಕೆಟ್ ನ ಈ ಸೂಪರ್ ಸ್ಟಾರ್

ಬಾಲಿವುಡ್ ನಟ ಅಮಿರ್ ಖಾನ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಸಾಧನೆಯನ್ನು ಶ್ಲಾಘಿಸಿದ್ದಾರೆ. ವಿರಾಟ್ ಕೊಹ್ಲಿ ಫೌಂಡೇಶನ್ ಆಯೋಜಿಸಿದ್ದ ಇಂಡಿಯನ್ ಸ್ಪೋರ್ಟ್ಸ್ ಗೌರವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಅಮಿರ್ ಖಾನ್ ಆಗಮಿಸಿದ್ದರು. ವಿರಾಟ್ ಕೊಹ್ಲಿ ಯುವ ಆಟಗಾರರಿಗೆ ಬೆಂಬಲ ನೀಡುವ ಕೆಲಸ ಮಾಡ್ತಿದ್ದಾರೆ. ಇದೊಂದು ಉತ್ತಮ ಕಲ್ಪನೆಯಾಗಿದೆ ಎಂದು ಅಮಿರ್ ಹೇಳಿದ್ದಾರೆ.

ಅಮಿರ್ ಖಾನ್ ಜೊತೆ ನೃತ್ಯ ನಿರ್ದೇಶಕಿ ಫರಾಹ್ ಖಾನ್ ಸೇರಿದಂತೆ ಕ್ರಿಕೆಟ್ ಹಾಗೂ ಸಿನಿಮಾ ಜಗತ್ತಿನ ಅನೇಕ ಗಣ್ಯರು ಕಾರ್ಯಕ್ರಮಕ್ಕೆ ಬಂದಿದ್ದರು. ವಿರಾಟ್ ಕೊಹ್ಲಿ ಪ್ರೇಯಸಿ ಅನುಷ್ಕಾ ಜೊತೆ ಕೈ ಹಿಡಿದು ರೆಡ್ ಕಾರ್ಪೆಟ್ ನಲ್ಲಿ ಕಾಣಿಸಿಕೊಂಡರು.

ಕಾರ್ಯಕ್ರಮಕ್ಕೆ ಹಾಜರಾಗಿದ್ದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಕೂಡ ವಿರಾಟ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಉತ್ತಮ ಆಟಗಾರರೊಂದೇ ಅಲ್ಲ ಉತ್ತಮ ವ್ಯಕ್ತಿ. ಒಬ್ಬ ಆಟಗಾರರಾಗಿ ಆಟದಲ್ಲಿ ಸಾಕಷ್ಟು ಬದಲಾವಣೆ ತರುವ ಯತ್ನ ಮಾಡ್ತಿದ್ದಾರೆ. ಜೊತೆಗೆ ಬೇರೆ ಕ್ರೀಡಾಪಟುಗಳಿಗೆ ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ ನೀಡ್ತಿದ್ದಾರೆಂದು ಸಾನಿಯಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...