alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತದ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯ ಆಡಲಿದೆ ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಟೆಸ್ಟ್ ಗೂ ಪದಾರ್ಪಣೆ ಮಾಡ್ತಿದೆ. ಭಾರತದ ವಿರುದ್ಧ ತನ್ನ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಬಿಸಿಸಿಐ ಜಂಟಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಲಂಡನ್ ನಲ್ಲಿ ನಡೆದ ಐಸಿಸಿ ವಾರ್ಷಿಕ ಸಭೆಯಲ್ಲಿ ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳಿಗೆ ಟೆಸ್ಟ್ ಮಾನ್ಯತೆ ಸಿಕ್ಕಿತ್ತು.

ಐರ್ಲೆಂಡ್ ತಂಡ ಪಾಕಿಸ್ತಾನದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಐರ್ಲೆಂಡ್ ನಲ್ಲೇ ಟೆಸ್ಟ್ ಸರಣಿ ಆಯೋಜಿಸಲಾಗಿದೆ. ಅಫ್ಘಾನಿಸ್ತಾನ ಮೊದಲ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಕೈಗೊಳ್ಳಲಿದೆ. ಆದ್ರೆ ನಿರ್ದಿಷ್ಟ ದಿನಾಂಕ ಮತ್ತು ಸ್ಥಳ ಇನ್ನೂ ನಿಗದಿಯಾಗಿಲ್ಲ.

2000ನೇ ಇಸ್ವಿಯಲ್ಲಿ ಬಾಂಗ್ಲಾದೇಶಕ್ಕೆ ಟೆಸ್ಟ್ ಮಾನ್ಯತೆ ಸಿಕ್ಕಿತ್ತು. ಅದಾದ್ಮೇಲೆ ಯಾವ ರಾಷ್ಟ್ರದ ತಂಡಕ್ಕೂ ಟೆಸ್ಟ್ ಮಾನ್ಯತೆ ಸಿಕ್ಕಿರಲಿಲ್ಲ. ಈಗ ಒಟ್ಟು 12 ರಾಷ್ಟ್ರಗಳಿಗೆ ಟೆಸ್ಟ್ ಮಾನ್ಯತೆ ದೊರೆತಿದೆ. 2011ರಲ್ಲಿ ಅಫ್ಘಾನಿಸ್ತಾನ ತಂಡ ಏಕದಿನ ಪಂದ್ಯವನ್ನಾಡಲು ಅರ್ಹತೆ ಪಡೆದುಕೊಂಡಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...