alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಗೀತೆ ಹಾಡಲು 4 ಕೋಟಿ ರೂ. ಸಂಭಾವನೆ?

bachhan 1

ಐಸಿಸಿ ವಿಶ್ವಕಪ್ ಟಿ-20 ಪಂದ್ಯಾವಳಿಯಲ್ಲಿ, ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳಾದ, ಭಾರತ ಮತ್ತು ಪಾಕಿಸ್ತಾನ ತಂಡಗಳು, ಶನಿವಾರ ನಡೆದ ಪಂದ್ಯದಲ್ಲಿ ಕೋಲ್ಕತಾದಲ್ಲಿ ಮುಖಾಮುಖಿಯಾಗಿದ್ದವು. ಪಂದ್ಯದಲ್ಲಿ ಭಾರತ ಗೆಲುವು ಕಂಡಿತ್ತು.

ಪಂದ್ಯದ ಆರಂಭದಲ್ಲಿ ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ರಾಷ್ಟ್ರಗೀತೆ ಹಾಡಿದ್ದರು. ರಾಷ್ಟ್ರಗೀತೆ ಹಾಡಲು ಅಮಿತಾಬ್ ಬಚ್ಚನ್ ಬರೋಬ್ಬರಿ 4 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ವದಂತಿ ಹರಡಿ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗಿತ್ತು. ಆದರೆ, ಅಮಿತಾಬ್ ಬಚ್ಚನ್ ರಾಷ್ಟ್ರಗೀತೆ ಹಾಡಲು ಯಾವುದೇ ಸಂಭಾವನೆ ಪಡೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಮಿತಾಬ್ ಯಾವುದೇ ಶುಲ್ಕ ಪಡೆದುಕೊಂಡಿಲ್ಲ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆ ತಿಳಿಸಿದೆ.

ಭಾರೀ ಕುತೂಹಲ ಮೂಡಿಸಿದ್ದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ರಾಷ್ಟ್ರಗೀತೆ ಹಾಡಲು ಮತ್ತು ಹಿರಿಯ ಕ್ರಿಕೆಟ್ ಆಟಗಾರರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲು ಅಮಿತಾಬ್ 4 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿದ್ದು, ಅದು ನಿಜವಲ್ಲ ಎಂದು ಕ್ರಿಕೆಟ್ ಮಂಡಳಿ ಸ್ಪಷ್ಟನೆ ನೀಡಿದೆ. ಅಲ್ಲದೇ, ಸ್ವಂತ ಖರ್ಚಿನಲ್ಲಿ ಅಮಿತಾಬ್ ಬಂದು ಹೋಗಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...