alex Certify
ಕನ್ನಡ ದುನಿಯಾ       Mobile App
       

Kannada Duniya

ಕುಂಬ್ಳೆ ಬಳಿಕ ಸೆಹ್ವಾಗ್ ಟೀಂ ಇಂಡಿಯಾ ಕೋಚ್

kumble-sevagf-ff

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ಅನಿಲ್ ಕುಂಬ್ಳೆ ನಡುವಿನ ಮನಸ್ತಾಪ ಮುಂದುವರೆದಿದೆ.

ಭಾರತ ತಂಡದ ಪ್ರಧಾನ ತರಬೇತುದಾರನ ಸ್ಥಾನದಲ್ಲಿ ಮುಂದುವರೆಯದಿರಲು ಅನಿಲ್ ಕುಂಬ್ಳೆ ತೀರ್ಮಾನಿಸಿದ್ದಾರೆ.

ಬಿ.ಸಿ.ಸಿ.ಐ. ನೊಂದಿಗೆ 1 ವರ್ಷದ ಒಪ್ಪಂದ ಮಾಡಿಕೊಂಡಿದ್ದ ಅನಿಲ್ ಕುಂಬ್ಳೆ ಅವರ ಅವಧಿ ಜೂನ್ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಹೊಸ ಕೋಚ್ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿತ್ತು.

ಅದರಂತೆ ವೀರೇಂದರ್ ಸೆಹ್ವಾಗ್, ದೊಡ್ಡ ಗಣೇಶ್, ಟಾಮ್ ಮೂಡಿ, ಲಾಲ್ ಚಂದ್ ರಜಪೂತ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದು, ಅನಿಲ್ ಕುಂಬ್ಳೆ ಅವರನ್ನು ಮುಂದುವರೆಸುವ ಕುರಿತಾಗಿಯೂ ಚರ್ಚೆ ನಡೆದಿದೆ.

ಆದರೆ, ವಿರಾಟ್ ಕೊಹ್ಲಿ ಮತ್ತು ಅನಿಲ್ ಕುಂಬ್ಳೆ ನಡುವೆ ಮನಸ್ತಾಪ ಹೆಚ್ಚಾಗಿರುವುದರಿಂದ ಕೋಚ್ ಹುದ್ದೆಯಲ್ಲಿ ಮುಂದುವರೆಯದಿರಲು ಕುಂಬ್ಳೆ ತೀರ್ಮಾನಿಸಿದ್ದಾರೆ.

ಬಿ.ಸಿ.ಸಿ.ಐ. ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ವಿ.ವಿ.ಎಸ್. ಲಕ್ಷ್ಮಣ್ ಅವರು ಅಭ್ಯರ್ಥಿಗಳ ಸಂದರ್ಶನ ನಡೆಸಿ ಸಮರ್ಥರನ್ನು ಕೋಚ್ ಹುದ್ದೆಗೆ ನೇಮಕ ಮಾಡಲಿದ್ದಾರೆ.

ಕುಂಬ್ಳೆ ಸ್ಥಾನಕ್ಕೆ ವೀರೇಂದರ್ ಸೆಹ್ವಾಗ್ ಅವರನ್ನು ಆಯ್ಕೆ ಮಾಡಲು ಬಿ.ಸಿ.ಸಿ.ಐ. ಆಸಕ್ತಿ ಹೊಂದಿದೆ. ಚಾಂಪಿಯನ್ಸ್ ಟ್ರೋಫಿ ಬಳಿಕ ಕುಂಬ್ಳೆ ಕೋಚ್ ಹುದ್ದೆಯನ್ನು ತೊರೆಯಲಿದ್ದು, ಬಹುತೇಕ ವೀರೇಂದರ್ ಸೆಹ್ವಾಗ್ ಅವರು ಆಯ್ಕೆಯಾಗುವುದು ನಿಶ್ಚಿತ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...