alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ-ಪಾಕ್ ಕ್ರಿಕೆಟ್ ತಂಡಗಳಿಗೆ ಬೇರೆ ಗುಂಪು ನೀಡಿ

anurag-t

ಮುಂಬೈ: ಮುಂದಿನ ಅಂತರರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳಲ್ಲಿ, ಭಾರತ ಹಾಗೂ ಪಾಕಿಸ್ತಾನ ತಂಡಗಳಿಗೆ, ಒಂದೇ ಗುಂಪಿನಲ್ಲಿ ಅವಕಾಶ ನೀಡಬಾರದೆಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಗೆ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮನವಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಉಗ್ರರು ದಾಳಿ ನಡೆಸಿದ ನಂತರ, ಭಾರತ ಮತ್ತು ಪಾಕ್ ನಡುವೆ ಆದ ಬೆಳವಣಿಗೆ ಹಿನ್ನಲೆಯಲ್ಲಿ ಮಂಡಳಿ ಈ ಬಗ್ಗೆ ಮನವಿ ಮಾಡಿದೆ. ಮಂಡಳಿಯ ಅಧ್ಯಕ್ಷ ಅನುರಾಗ್ ಠಾಕೂರ್, ಉರಿ ದಾಳಿ ನಂತರ ನಡೆದಿರುವ ಘಟನೆಗಳು ಕ್ರಿಕೆಟ್ ಮೇಲೆಯೂ ಪರಿಣಾಮ ಬೀರಿದ್ದು, ಮುಂದಿನ ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತ ಹಾಗೂ ಪಾಕ್ ತಂಡಗಳನ್ನು ಒಂದೇ ಗುಂಪಿನಲ್ಲಿ ಸೇರಿಸದಂತೆ ಮನವಿ ಮಾಡಿದ್ದಾರೆ.

ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ ಪಾಕ್ ವಿರುದ್ಧ ಆಡುವುದನ್ನು ಆದಷ್ಟು ನಿರ್ಲಕ್ಷಿಸಲಾಗುವುದು. ನಾಕೌಟ್ ಹಂತದಲ್ಲಿ ಪಾಕಿಸ್ತಾನದೊಂದಿಗೆ ಆಡುವ ಸಂದರ್ಭ ಬಂದರೆ ಏನೂ ಮಾಡಲಾಗದು ಎಂದು ಠಾಕೂರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...