alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಯಲ್ಲಿ ಮತ್ತೆ ಒಂದಾದ ವಿರಾಟ್-ಅನುಷ್ಕಾ

ಬಹು ವರ್ಷಗಳ ಕಾಲ ಜೋಡಿ ಹಕ್ಕಿಗಳಂತೆ ವಿಹರಿಸಿದ್ದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ವರ್ಷ ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ವಿವಾಹವಾದ ಕೆಲ ದಿನಗಳ ಬಳಿಕ ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಕಾರಣ ಬಿಡುವು ಸಿಕ್ಕಾಗ ಮಾತ್ರ ಭೇಟಿಯಾಗುವಂತಾಗಿತ್ತು.

ಅಫ್ರಿಕಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಶ್ರೀಲಂಕಾ ಪ್ರವಾಸದಿಂದ ವಿರಾಟ್ ಕೊಹ್ಲಿ ದೂರವುಳಿದಿದ್ದು, ಇದರಿಂದಾಗಿ ವಿರಾಟ್-ಅನುಷ್ಕಾ ಒಟ್ಟಿಗೆ ಕಾಲ ಕಳೆಯುವಂತಾಗಿತ್ತು. ಈಗ ಅನುಷ್ಕಾ, ವರುಣ್ ಧವನ್ ಜೊತೆಗಿನ ‘ಸುಹಿ ಧಾಗಾ’ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಜೊತೆಗಿನ ‘ಝೀರೋ’ ಚಿತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರೆ, ವಿರಾಟ್ ಕೊಹ್ಲಿ ಮುಂಬರುವ ಐಪಿಎಲ್ ಸರಣಿಯಲ್ಲಿ ಆಡಲು ಸಜ್ಜಾಗುತ್ತಿದ್ದಾರೆ.

ಇದರ ಮಧ್ಯೆ ಶೂಟಿಂಗ್ ನಿಂದ ಬಿಡುವು ಮಾಡಿಕೊಂಡ ಅನುಷ್ಕಾ ಶರ್ಮಾ, ಪತಿ ವಿರಾಟ್ ಕೊಹ್ಲಿಯನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಶನಿವಾರ ಮಧ್ಯಾಹ್ನ ಈ ಜೋಡಿ ನವದೆಹಲಿಯಲ್ಲಿರುವ ಬ್ರಿಟಿಷ್ ಹೈಕಮೀಷನ್ ಕಛೇರಿಗೆ ಭೇಟಿ ನೀಡಿದ್ದು, ಈ ಚಿತ್ರಗಳನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...