alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳ ಕಣ್ಣು ತಪ್ಪಿಸಿ ಇಂಗ್ಲೆಂಡ್ ತಲುಪಿದ ಕೊಹ್ಲಿ ಪತ್ನಿ

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಶುಕ್ರವಾರ ಇಂಗ್ಲೆಂಡ್ ವಿರುದ್ಧ ಎರಡನೇ ಟಿ-20 ಪಂದ್ಯವನ್ನಾಡಲಿದೆ. ಇದಕ್ಕೆ ಎಲ್ಲ ತಯಾರಿ ನಡೆದಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿರುವ ಭಾರತ ಎರಡನೇ ಪಂದ್ಯವನ್ನು ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ಕಾತರದಲ್ಲಿದೆ. ಮೂರು ಟಿ-20 ಸರಣಿ ನಂತ್ರ ಭಾರತ ಮೂರು ಏಕದಿನ ಪಂದ್ಯ ಹಾಗೂ ಐದು ಟೆಸ್ಟ್ ಪಂದ್ಯವನ್ನಾಡಲಿದೆ.

ಶುಕ್ರವಾರ ಕಾರ್ಡಿಫ್ ನಲ್ಲಿ ಎರಡನೇ ಟಿ-20 ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಈಗಾಗಲೇ ಕಾರ್ಡಿಫ್ ತಲುಪಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಬ್ಯುಸಿ ಶೆಡ್ಯುಲ್ ಮಧ್ಯೆಯೇ ಕಾರ್ಡಿಫ್ ಗೆ ತೆರಳಿದ್ದಾರೆ. ಅಭಿಮಾನಿಗಳ ಕಣ್ಣು ತಪ್ಪಿಸಿ ಇಂಗ್ಲೆಂಡ್ ಗೆ ತೆರಳಿರುವ ಅನುಷ್ಕಾ ಬುಧವಾರ ಟೀಂ ಇಂಡಿಯಾ ಬಸ್ ನಲ್ಲಿ ಕೊಹ್ಲಿ ಪಕ್ಕದಲ್ಲಿ ಕಾಣಿಸಿಕೊಂಡಿದ್ದಾರೆ.

ಕೊಹ್ಲಿ ಪಕ್ಕದಲ್ಲಿ ಅನುಷ್ಕಾ ಕುಳಿತಿರುವ ಫೋಟೋವನ್ನು ಅಭಿಮಾನಿಯೊಬ್ಬರು ತಮ್ಮ ಇನ್ಸ್ಟ್ರಾಗ್ರಾಮ್ ಅಕೌಂಟ್ ನಲ್ಲಿ ಹಂಚಿಕೊಂಡಿದ್ದಾರೆ. ಅನುಷ್ಕಾ ಟೀಂ ಇಂಡಿಯಾಕ್ಕೆ ಉತ್ಸಾಹ ತುಂಬಲು ಒಂದಲ್ಲ ಒಂದು ಪಂದ್ಯದಲ್ಲಿ ಕಾಣಿಸಿಕೊಳ್ತಾರೆ. ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅನುಷ್ಕಾ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...