alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿಯನ್ನು ಅಭಿನಂದಿಸಿದ ಅನುಷ್ಕಾ !

anushka-virat

ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸಮನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಡುವಿನ ಬ್ರೇಕ್ ಅಪ್ ಅಂತ್ಯವಾಗುವ ಲಕ್ಷಣಗಳು ಕಂಡು ಬರುತ್ತಿದೆ. ಇದಕ್ಕೆ ಕಾರಣವಾಗಿರುವುದು ಕೋಲ್ಕತ್ತಾದಲ್ಲಿ ನಡೆದ ಪಂದ್ಯ ಎಂಬುದು ಗಮನಾರ್ಹ.

ಶನಿವಾರದಂದು ನಡೆದ ವಿಶ್ವ ಕಪ್ ಟಿ20 ಪಂದ್ಯದಲ್ಲಿ ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್ ಗಳ ಅಂತರದಿಂದ ಪರಾಭವಗೊಳಿಸಿತ್ತು. ಈ ಪಂದ್ಯದಲ್ಲಿ ಭರ್ಜರಿ ಆಟವಾಡಿದ್ದ ವಿರಾಟ್ ಕೊಹ್ಲಿ ಗೆಲುವಿನ ರೂವಾರಿಯಾಗಿದ್ದರು.

ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿಯವರನ್ನು ಅಭಿನಂದಿಸಿ ಮೆಸೇಜ್ ಕಳುಹಿಸಿದ್ದಾರೆನ್ನಲಾಗಿದೆ. ಸದ್ಯ ಸಲ್ಮಾನ್ ಖಾನ್ ಜೊತೆಗಿನ ‘ಸುಲ್ತಾನ್’ ಚಿತ್ರದಲ್ಲಿ ಬ್ಯುಸಿಯಾಗಿರುವ ಅನುಷ್ಕಾ ಶರ್ಮಾ ಕಳುಹಿಸಿರುವ ಸಂದೇಶಕ್ಕೆ ಕೊಹ್ಲಿಯೂ ಪ್ರತ್ಯುತ್ತರಿಸಿದ್ದು, ಇಬ್ಬರ ನಡುವಿನ ಮುನಿಸು ಕೊನೆಯಾಗಲಿದೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.

Related News

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...