alex Certify
ಕನ್ನಡ ದುನಿಯಾ       Mobile App
       

Kannada Duniya

ಮೈದಾನದ ಶುಚಿತ್ವ ನೌಕರರಿಗೆ ಸಾಥ್ ಕೊಟ್ಟ ಖ್ಯಾತ ಕ್ರಿಕೆಟರ್ ಪುತ್ರ

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಭವಿಷ್ಯದಲ್ಲಿ ಟೀಮ್ ಇಂಡಿಯಾ ಸೇರೋದಕ್ಕೆ ಸಾಕಷ್ಟು ತಯಾರಿಗಳನ್ನ ನಡೆಸ್ತಿದ್ದಾರೆ. ಇತ್ತೀಚೆಗಷ್ಟೆ ಶ್ರೀಲಂಕಾದಲ್ಲಿ ನಡೆದ ಅಂಡರ್ 19 ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅವರು ಹೇಳಿಕೊಳ್ಳುವಂತಾ ಪ್ರದರ್ಶನವನ್ನೇನು ನೀಡಿರಲಿಲ್ಲ.

ಪ್ರಮುಖ ಬೌಲರ್ ಆಗಿ ಎರಡು ಪಂದ್ಯಗಳಲ್ಲಿ ಮೂರು ವಿಕೆಟ್ ಪಡೆದಿದ್ದರು. ಆನಂತರದಲ್ಲಿ ಅರ್ಜುನ್ ತೆಂಡೂಲ್ಕರ್ ಈಗ ಇಂಗ್ಲೆಂಡ್ ನ ಲಾರ್ಡ್ಸ್ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಆಟಗಾರನಾಗಿ ಅಲ್ಲ ಸಹಾಯಕ ಕೆಲಸಗಾರನಾಗಿ.

ಹೌದು. ಇಂಗ್ಲೆಂಡ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ಭಾರತದ ಎರಡನೇ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ಸಹಾಯಕನಾಗಿ ಅರ್ಜುನ್ ಕಾಣಿಸಿಕೊಂಡಿದ್ದಾರೆ. ಮೈದಾನದ ಶುಚಿತ್ವವನ್ನು ಕಾಪಾಡುವ ಕೆಲಸಗಾರರೊಂದಿಗೆ ಅರ್ಜುನ್ ತೆಂಡೂಲ್ಕರ್ ಕೈ ಜೋಡಿಸಿದ್ದಾರೆ.

ಈ ಸಂದರ್ಭದಲ್ಲಿ ತೆಗೆದ ಫೋಟೋ ಒಂದನ್ನ ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದೆ. ಅರ್ಜುನ್ ರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಅರ್ಜುನ್ ಇತ್ತೀಚೆಗಷ್ಟೆ ಇಂಗ್ಲೆಂಡ್ ನ ಮಹಿಳಾ ಕ್ರಿಕೆಟರ್ ಡೇನಿಯಲ್ ವಾಟ್ ಜೊತೆಗೆ ಲಂಚ್ ಮಾಡಿದ್ದ ಫೋಟೋ ಕೂಡ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ನಾಲ್ಕು ವರ್ಷಗಳ ಹಿಂದೆ ವಿರಾಟ್ ಕೊಹ್ಲಿಗೆ ಮದುವೆ ಪ್ರಪೋಸಲ್ ಇಟ್ಟು ಡೇನಿಯಲ್ ಫೇಮಸ್ಸಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...