alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಡ್ನಿಯಲ್ಲಿ ಸಚಿನ್ ಪುತ್ರನ ಶೈನಿಂಗ್ ಶೈನಿಂಗ್….

ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಸಿಡ್ನಿಯಲ್ಲಿ ಮಿಂಚು ಹರಿಸಿದ್ದಾರೆ. ಸಿಡ್ನಿಯಲ್ಲಿ ನಡೆದ ಟಿ -20 ಪಂದ್ಯದಲ್ಲಿ ಕ್ರಿಕೇಟರ್ಸ್ ಕ್ಲಬ್ ಆಫ್ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ ಅರ್ಜುನ್ ತೆಂಡೂಲ್ಕರ್ 48 ರನ್ ಗಳಿಸಿ, 4 ವಿಕೆಟ್ ಪಡೆದಿದ್ದಾರೆ.

ಸ್ಪಿರಿಟ್ ಆಫ್ ಕ್ರಿಕೆಟ್ ಗ್ಲೋಬಲ್ ಚಾಲೆಂಜ್ ಕಾರ್ಯಕ್ರಮದ ಅಂಗವಾಗಿ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಹಾಂಕಾಂಗ್ ಕ್ರಿಕೆಟ್ ಕ್ಲಬ್ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ 27 ಎಸೆತಗಳಲ್ಲಿ 48 ರನ್ ಗಳಿಸಿದ್ದಾರೆ. ಬೌಲಿಂಗ್ ನಲ್ಲಿಯೂ ಮಿಂಚಿದ 18 ವರ್ಷದ ಅರ್ಜುನ್ ತೆಂಡೂಲ್ಕರ್ 4 ವಿಕೆಟ್ ಪಡೆದಿದ್ದಾರೆ.

ಎಡಗೈ ಬ್ಯಾಟ್ಸ್ ಮನ್ ಮತ್ತು ಎಡಗೈ ಮಧ್ಯಮ ವೇಗದ ಬೌಲರ್ ಆಗಿರುವ ಅವರು ಸಿಡ್ನಿಯಲ್ಲಿ ಅಮೋಘ ಆಲ್ ರೌಂಡ್ ಪ್ರದರ್ಶನ ನೀಡಿದ್ದಾರೆ.

ನಾನು ಯಾವುದೇ ಒತ್ತಡಕ್ಕೆ ಒಳಗಾಗದೇ ಸಮಯ, ಸಂದರ್ಭಕ್ಕೆ ತಕ್ಕಂತೆ ನನ್ನ ಆಟವನ್ನು ಆಡುತ್ತೇನೆ ಎಂದು ಅರ್ಜುನ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...