alex Certify
ಕನ್ನಡ ದುನಿಯಾ       Mobile App
       

Kannada Duniya

ನಿವೃತ್ತಿ ಘೋಷಿಸಲು ಮುಂದಾದ ಆಶೀಶ್ ನೆಹ್ರಾ

ನವದೆಹಲಿ: ಅನುಭವಿ ಬೌಲರ್ ಆಶೀಶ್ ನೆಹ್ರಾ ನವೆಂಬರ್ 1 ರಂದು ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ. ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ -20 ಪಂದ್ಯ ನಡೆಯಲಿದ್ದು, ಈ ಪಂದ್ಯದ ಬಳಿಕ ನೆಹ್ರಾ ನಿವೃತ್ತಿ ಘೋಷಿಸಲಿದ್ದಾರೆ.

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಅವರೊಂದಿಗೆ ನೆಹ್ರಾ ಈಗಾಗಲೇ ಚರ್ಚೆ ನಡೆಸಿದ್ದು, ನಿವೃತ್ತಿಗೆ ಸರಿಯಾದ ಸಮಯ ಇದಾಗಿದೆ ಎಂದು ಹೇಳಿದ್ದಾರೆ.

2018 ರಲ್ಲಿ ಐ.ಸಿ.ಸಿ. ಯಾವುದೇ ಪ್ರಮುಖ ಟೂರ್ನಿಗಳನ್ನು ಆಯೋಜಿಸಿಲ್ಲ. ಕಿರಿಯ ಆಟಗಾರರು ತಂಡ ಸೇರಲು ಅನುಕೂಲವಾಗುವಂತೆ ನೆಹ್ರಾ ವಿದಾಯ ಹೇಳಲು ನಿರ್ಧರಿಸಿದ್ದಾರೆ.

1999 ರಲ್ಲಿ ಭಾರತ ತಂಡಕ್ಕೆ ಸೇರ್ಪಡೆಯಾದ ನೆಹ್ರಾ 17 ಟೆಸ್ಟ್ ಗಳಲ್ಲಿ 44 ವಿಕೆಟ್ ಗಳಿಸಿದ್ದಾರೆ. 120 ಏಕದಿನ ಪಂದ್ಯಗಳಿಂದ 157 ವಿಕೆಟ್, 26 ಟಿ -20 ಪಂದ್ಯಗಳಿಂದ 34 ವಿಕೆಟ್ ಗಳಿಸಿದ್ದಾರೆ.

ನ್ಯೂಜಿಲೆಂಡ್ ಸರಣಿಗೆ ನೆಹ್ರಾ ಆಯ್ಕೆಯಾಗುವ ಸಾಧ್ಯತೆ ಇಲ್ಲ. ಹೈದರಾಬಾದ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ -20 ಪಂದ್ಯವೇ ಕೊನೆಯ ಪಂದ್ಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...