alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಮ್ಮೆ ಪಾಕ್ ಮಣಿಸಲು ಟೀಂ ಇಂಡಿಯಾ ಸಜ್ಜು

ಇಂದು ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಕಾದಾಟದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಸೆಣೆಸಲಿವೆ. ಸೂಪರ್ ಫೋರ್ ಹಂತದ ಮೊದಲ ಪಂದ್ಯ ಗೆದ್ದ ರೋಹಿತ್ ಪಡೆ ಈ ಪಂದ್ಯ ಗೆದ್ದು, ಫೈನಲ್ ಗೆ ಹತ್ತಿರವಾಗುವ ಕನಸು ಕಾಣ್ತಾ ಇದೆ.

ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ರೋಹಿತ್ ಪಡೆ, ಬಾಂಗ್ಲಾ ವಿರುದ್ಧವೂ ಸಂಘಟಿತ ಆಟದ ಮೂಲಕವೇ ಗಮನ ಸೆಳೆದಿತ್ತು. ಭಾನುವಾರ ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿಗಳು ಕಾದಾಟ ನಡೆಸಲಿದ್ದಾರೆ. ಲೀಗ್ ಹಂತದಲ್ಲಿ ಪಾಕ್ ತಂಡವನ್ನು ಕಟ್ಟಿ ಹಾಕಿದ ರೋಹಿತ್ ಪಡೆ, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ.

ಭಾರತದ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡ್ತಾ ಇದ್ದು ಎಲ್ಲರ ಗಮನ ಸೆಳೆದಿದ್ದಾರೆ. ಇನ್ನು ಆರಂಭಿಕರು ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡ್ತಾ ಇದ್ದು, ತಂಡಕ್ಕೆ ಬೂಸ್ಟ್ ನೀಡಿದೆ. ಮಧ್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು ತಮ್ಮ ಘನತೆಗೆ ತಕ್ಕ ಆಟ ಆಡಬೇಕಿದೆ. ಇನ್ನು ದಿನೇಶ್ ಕಾರ್ತಿಕ್ ಹಾಗೂ ಮಹೇಂದ್ರ ಸಿಂಗ್ ಧೋನಿ ತಮ್ಮ ಅನುಭವದ ಧಾರೆ ಎರೆದು ಬ್ಯಾಟ್ ಮಾಡಿದ್ರೆ, ಎದುರಾಳಿಗಳನ್ನು ಕಾಡಬಲ್ಲರು.

ಸ್ವಿಂಗ್ ಬೌಲರ್ ಭುವನೇಶ್ವರ್ ಕುಮಾರ್ ಹಾಗೂ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬೂಮ್ರಾ ಎದುರಾಳಿ ತಂಡಕ್ಕೆ ಮಾರಕವಾಗಬಲ್ಲರು. ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ ಅನುಭವಿ ಎಡಗೈ ಸ್ಪಿನ್ ಬೌಲರ್ ರವೀಂದ್ರ ಜಡೇಜಾ ನಾಲ್ಕು ವಿಕೆಟ್ ತೆಗೆದು ಬೀಗಿದ್ದು, ಭರವಸೆ ಹೆಚ್ಚಿಸಿದ್ದಾರೆ. ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್ ಬಿಗುವಿನ ದಾಳಿ ನಡೆಸಬೇಕಿದೆ.

ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಪ್ರಯಾಸದ ಜಯ ಸಾಧಿಸಿದ್ದ ಪಾಕಿಸ್ತಾನ ತಂಡಕ್ಕೆ ಈ ಪಂದ್ಯ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ, ಲೀಗ್ ಹಂತದಲ್ಲಿ ಬ್ಲ್ಯೂ ಬಾಯ್ಸ್ ವಿರುದ್ಧ ಕಂಡಿದ್ದ ಸೋಲಿನ ನೋವನ್ನು ಮರೆಯಲು ಪಾಕ್ ಪ್ಲಾನ್ ಮಾಡಿಕೊಂಡಿದೆ.

ಸ್ಥಳ: ದುಬೈ
ನೇರ ಪ್ರಸಾರ: ಸ್ಟಾರ್ ನೆಟ್ವರ್ಕ್
ಸಮಯ: ಸಂಜೆ 5ಕ್ಕೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...