alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 14 ಹಾಕಿ ಆಟಗಾರರ ಸಾವು

ಕೆನಡಾದಲ್ಲಿ ಜೂನಿಯರ್ ಹಾಕಿ ತಂಡ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ.

ರಾಜಧಾನಿ ಒಟ್ಟಾವಾದಿಂದ ದೂರದ ಪಶ್ಚಿಮ ಕೆನಡಾದ ಸಾಸ್ಕಾಚೆವನ್ ತಿಸ್ದಾಲ್ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಟ್ರೇಲರ್ ಹಾಗೂ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

16 -24 ವರ್ಷ ವಯೋಮಿತಿಯ ಸುಮಾರು 28 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. 14 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಾಸ್ಕಾಚೆವನ್ ನಲ್ಲಿ ಆಯೋಜಿಸಿದ್ದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಜೂನಿಯರ್ ಹಾಕಿ ತಂಡ ಪ್ರಯಾಣ ಬೆಳೆಸುವಾಗ ಈ ದುರಂತ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...