alex Certify
ಕನ್ನಡ ದುನಿಯಾ       Mobile App
       

Kannada Duniya

ನಿವೃತ್ತಿ ಬಗ್ಗೆ ಬಾಯ್ಬಿಟ್ಟ ಟೀಂ ಇಂಡಿಯಾ ನಾಯಕ ಧೋನಿ

dhoni-

ಮುಂಬೈ: ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್ ಗಳ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಯಶಸ್ವಿ ನಾಯಕರಲ್ಲಿ ಒಬ್ಬರು. ಅವರ ನಾಯಕತ್ವದಲ್ಲಿ ಏಕದಿನ ಮತ್ತು ಟಿ-20 ವಿಶ್ವಕಪ್ ಅನ್ನು ಟೀಂ ಇಂಡಿಯಾ ಗೆದ್ದುಕೊಂಡಿದೆ.

ಸದ್ಯ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದೆ. ಇದೇ ಸಂದರ್ಭದಲ್ಲಿ ಏಕದಿನ ಮತ್ತು ಟಿ-20 ಪಂದ್ಯಗಳ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಜೀವನಾಧಾರಿತ ‘ಎಂ.ಎಸ್.ಧೋನಿ-ದಿ ಅನ್ ಟೋಲ್ಡ್ ಸ್ಟೋರಿ’ ಬಾಲಿವುಡ್ ಸಿನಿಮಾ ಟ್ರೈಲರ್ ರಿಲೀಸ್ ಆಗಿದೆ. ಈ ಟ್ರೈಲರ್ ರಿಲೀಸ್ ಮಾಡಿದ ಧೋನಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಮ್ಮ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಕ್ರಿಕೆಟ್ ಜಗತ್ತಿನಿಂದ ನಾನು ನಿವೃತ್ತಿ ಘೋಷಿಸುವ ಸಮಯ ಇನ್ನೂ ದೂರವಿದೆ ಎಂದು ಹೇಳಿದ್ದಾರೆ.

ನಾನು ಸದ್ಯಕ್ಕೆ ನನ್ನ ಆಟದ ಮೇಲೆ ಗಮನ ಕೇಂದ್ರೀಕರಿಸಲು ಒತ್ತು ನೀಡಿದ್ದೇನೆ. ಹಿಂದಿನ ಅನುಭವಗಳಿಂದ ಮುಂದಿನ ಗುರಿಯ ಬಗ್ಗೆ ಯೋಚಿಸುತ್ತೇನೆ. ನನ್ನ ಯಶಸ್ಸಿಗೆ, ಗುರಿ ಸಾಧನೆಗೆ ಕುಟುಂಬದವರು, ಗೆಳೆಯರು ಹಾಗೂ ದೇಶದ ಜನರ ಸ್ಪೂರ್ತಿ ಕಾರಣ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...