alex Certify
ಕನ್ನಡ ದುನಿಯಾ       Mobile App
       

Kannada Duniya

ಸರಣಿ ಕೈ ವಶಕ್ಕೆ ಕೊಹ್ಲಿ ಬಾಯ್ಸ್ ರೆಡಿ

ಇಂದೋರ್: ಇಲ್ಲಿನ ಹೋಳ್ಕರ್ ಮೈದಾನದಲ್ಲಿ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವೆ, 3 ನೇ ಏಕದಿನ ಪಂದ್ಯ ನಡೆಯಲಿದೆ.

ಮೊದಲೆರಡು ಪಂದ್ಯಗಳನ್ನು ಜಯಿಸಿದ ವಿಶ್ವಾಸದಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ, 3 ನೇ ಪಂದ್ಯವನ್ನೂ ಜಯಿಸುವ ವಿಶ್ವಾಸದಲ್ಲಿದೆ.

ಕಳೆದೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ನಲ್ಲಿ ಮಿಂಚಿದ್ದಾರೆ. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್ ಕಮಾಲ್ ಮಾಡಿದ್ದಾರೆ.

ಸರಣಿಯಲ್ಲಿ 2 ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ 3 ನೇ ಪಂದ್ಯವನ್ನು ಜಯಿಸಲು ಕಾರ್ಯತಂತ್ರ ರೂಪಿಸಿದೆ. ಡೇವಿಡ್ ವಾರ್ನರ್ ಇಂದಿನ ಪಂದ್ಯದಲ್ಲಿ ಲಯ ಕಂಡುಕೊಳ್ಳುವ ವಿಶ್ವಾಸ ಹೊಂದಿದ್ದಾರೆ. ಮ್ಯಾಥ್ಯೂ ವೇಡ್, ಗ್ಲೆನ್ ಮ್ಯಾಕ್ಸ್ ವೆಲ್ ಕೂಡ ಸಾಮರ್ಥ್ಯ ತೋರಲು ಸಜ್ಜಾಗಿದ್ದಾರೆ.

ಮಧ್ಯಾಹ್ನ 1.30 ಕ್ಕೆ ಇಂದೋರ್ ನ ಹೋಳ್ಕರ್ ಮೈದಾನದಲ್ಲಿ 3 ನೇ ಏಕದಿನ ಪಂದ್ಯ ಆರಂಭವಾಗಲಿದ್ದು, ಗೆಲುವಿಗೆ ಉಭಯ ತಂಡಗಳು ಕಾರ್ಯತಂತ್ರ ರೂಪಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...