alex Certify
ಕನ್ನಡ ದುನಿಯಾ       Mobile App
       

Kannada Duniya

ಆಟಗಾರರ ಕ್ರೀಡಾ ಸ್ಪೂರ್ತಿಗೆ ಹ್ಯಾಟ್ಸಾಫ್

hockey ಅ 18

ಮಲೇಷ್ಯಾದ ಇಪೊನಲ್ಲಿ ನಡೆದ ಅಜ್ಲಾನ್ ಷಾ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ. ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ತಂಡ ಫೈನಲ್ ಪಂದ್ಯದಲ್ಲಿ ಆಸೀಸ್ ಎದುರು ಮುಗ್ಗರಿಸಿತು.

ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಭಾರತದ ಆಟಗಾರ 23 ವರ್ಷದ ಮನ್ ಪ್ರೀತ್ ಸಿಂಗ್ ಉತ್ತಮ ಪ್ರದರ್ಶನ ನೀಡಿದರು. ಅವರ ತಂದೆ ನಿಧನರಾಗಿದ್ದರಿಂದ ಭಾರತಕ್ಕೆ ವಾಪಸ್ ಆಗಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ತಂಡಕ್ಕೆ ತಮ್ಮ ಅಗತ್ಯತೆ ಇದೆ ಎಂಬುದನ್ನು ಮನಗಂಡು, ತಂದೆಯ ಸಾವಿನ ನೋವಲ್ಲೂ ಮತ್ತೆ ಮಲೇಷ್ಯಾಕ್ಕೆ ಹೋಗಿ ಟೂರ್ನಿಯಲ್ಲಿ ಭಾಗವಹಿಸಿದ್ದರು. ಅಲ್ಲದೇ, ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರು ಕ್ರೀಡಾ ಸ್ಪೂರ್ತಿ ಮೆರೆದರು. ಪಂದ್ಯ ಆರಂಭಕ್ಕೂ ಮೊದಲು, ನಿಧನರಾದ ಮನ್ ಪ್ರೀತ್ ಸಿಂಗ್ ಅವರ ತಂದೆಗೆ ಸಂತಾಪ ಸೂಚಿಸಿ ಗೌರವ ಸಲ್ಲಿಸಿದರು. ಕಪ್ಪು ಪಟ್ಟಿ ಧರಿಸಿ ಆಟವಾಡಿದರು. ಇದನ್ನು ಕಂಡ ಮನ್ ಪ್ರೀತ್ ಸಿಂಗ್ ಭಾವುಕರಾದರೆ, ಕ್ರೀಡಾಪಟುಗಳು, ಕ್ರೀಡಾಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...