alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಮರಾದಲ್ಲಿ ಸೆರೆಯಾಗಿದೆ ಪ್ರೇಯಸಿ ಮೇಲಿನ ಆಟಗಾರನ ಹಲ್ಲೆ

ಡಾನ್ರಿ ವಜ್ಕೆಜ್ ಎಂಬ ವೆನೆಜುವೆಲಾದ ಬೇಸ್ ಬಾಲ್ ಆಟಗಾರನೊಬ್ಬ ಗೆಳತಿ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದು 2016ರ ವಿಡಿಯೋ. ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ರಿಲೀಸ್ ಆದ ಬೆನ್ನಲ್ಲೇ ಡಾನ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೆಟ್ಟಿಲು ಇಳಿದುಕೊಂಡು ಬರುತ್ತಿರುವ ಸಂದರ್ಭದಲ್ಲಿ ಪ್ರೇಯಸಿಯನ್ನು ಎಳೆದು, ಆಕೆಗೆ ಹೊಡೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.

ಈ ಘಟನೆ ನಡೆದ ಸಂದರ್ಭದಲ್ಲಿ ಡಾನ್ರಿ ಕಾರ್ಪಸ್ ಕ್ರಿಸ್ಟಿ ಹುಕ್ಸ್ ತಂಡದ ಪರ ಆಡುತ್ತಿದ್ದ. ಕೌಟುಂಬಿಕ ಹಿಂಸಾಚಾರ ಆರೋಪದ ಮೇಲೆ ಅವನನ್ನು ಬಂಧಿಸಲಾಗಿತ್ತು. ಆದ್ರೆ ದಂಡ ಪಾವತಿಸಿ ಆತ ಜೈಲಿನಿಂದ ಬಿಡುಗಡೆಯಾಗಿದ್ದ.

ಈಗ ಮತ್ತದೇ ವಿಡಿಯೋ ಆನ್ ಲೈನ್ ನಲ್ಲಿ ಹರಿದಾಡ್ತಿದೆ. ಡಾನ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ. ಆದ್ರೆ ಸಂಧಾನ ಮಾಡಿಕೊಂಡಿದ್ದರಿಂದ ಆತನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನೂ ಕೈಬಿಡಲಾಗಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...