alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾಗೆ ಮತ್ತಿಬ್ಬರು ಕೋಚ್ ನೇಮಕ

cri cc

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ) ಟೀಂ ಇಂಡಿಯಾ ಕ್ರಿಕೆಟ್ ತಂಡಕ್ಕೆ ಮತ್ತಿಬ್ಬರು ಕೋಚ್ ಗಳನ್ನು ನೇಮಕ ಮಾಡಿದೆ. ಈಗಾಗಲೇ ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಮಾಜಿ ಆಟಗಾರ, ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದೆ.

ಅನಿಲ್ ಕುಂಬ್ಳೆ ಪ್ರಧಾನ ಕೋಚ್ ಆಗಿದ್ದು, ಅವರೊಂದಿಗೆ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಕೋಚ್ ಗಳನ್ನು ನೇಮಕ ಮಾಡಲಾಗಿದೆ. ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್, ಫೀಲ್ಡಿಂಗ್ ಕೋಚ್ ಆಗಿ ಅಭಯ್ ಶರ್ಮ ಅವರನ್ನು ನೇಮಕ ಮಾಡಲಾಗಿದೆ. ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿರುವ ಅನಿಲ್ ಕುಂಬ್ಳೆ ಸಲಹೆ ಮೇರೆಗೆ ಸಂಜಯ್ ಬಂಗಾರ್ ಹಾಗೂ ಅಭಯ್ ಶರ್ಮ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ  ಸಹಾಯಕ ಕೋಚ್ ಗಳಾಗಿ ನೇಮಕ ಮಾಡಿದೆ.

ಅನಿಲ್ ಕುಂಬ್ಳೆ ಟೀಂ ಇಂಡಿಯಾ ತಂಡದ ನೂತನ ಕೋಚ್ ಆಗಿದ್ದು, ಯುವ ಆಟಗಾರರಿಗೆ ಅಣ್ಣನ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇನೆ. ತಂಡದ ಯಶಸ್ಸಿಗೆ ಹಲವು ಯೋಜನೆ ರೂಪಿಸಿದ್ದು, ಹಿರಿಯರು, ಕಿರಿಯರೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...