alex Certify
ಕನ್ನಡ ದುನಿಯಾ       Mobile App
       

Kannada Duniya

BCCI ಕಚೇರಿ ಬೆಂಗಳೂರಿಗೆ ಶಿಫ್ಟ್

ನವದೆಹಲಿ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(BCCI) ಪ್ರಧಾನ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲಾಗುವುದು.

ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿ ಬಿ.ಸಿ.ಸಿ.ಐ. 40 ಎಕರೆ ಜಮೀನು ಪಡೆದುಕೊಂಡಿದೆ. ಈ ಸ್ಥಳದಲ್ಲಿ ಬಿ.ಸಿ.ಸಿ.ಐ. ಅತ್ಯಾಧುನಿಕವಾದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ನಿರ್ಮಾಣಕ್ಕೆ ಮುಂದಾಗಿದೆ. ಇದೇ ಸ್ಥಳದಲ್ಲಿ ಮಂಡಳಿಯ ಕೇಂದ್ರ ಕಚೇರಿಯನ್ನು ನಿರ್ಮಿಸಲಾಗುವುದು.

ಪಂಚತಾರಾ ಹೋಟೆಲ್ ಸೌಲಭ್ಯಗಳನ್ನು ಹೊಸ ಕಟ್ಟಡ ಒಳಗೊಳ್ಳಲಿದೆ. ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಬಿ.ಸಿ.ಸಿ.ಐ. ಸಭೆಗಳಿಗೆ ಕೋಟ್ಯಂತರ ರೂ. ವೆಚ್ಚ ಮಾಡಲಾಗುತ್ತದೆ. ಬೆಂಗಳೂರಿಗೆ ಕಚೇರಿ ಶಿಫ್ಟ್ ಆದಲ್ಲಿ ಹೊಸ ಕಟ್ಟಡದಲ್ಲಿಯೇ ಸಭೆಗಳನ್ನು ನಡೆಸಲಾಗುವುದು.

ಮುಂಬೈನಿಂದ ಕೇಂದ್ರ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವ ಬಗ್ಗೆ ಬಿ.ಸಿ.ಸಿ.ಐ. ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ, ಸದಸ್ಯರಿಗೆ ಪತ್ರ ಬರೆದು ಸಲಹೆ ಕೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...