alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ಅನಿಲ್ ಕುಂಬ್ಳೆ ವಾರ್ಷಿಕ ಸಂಭಾವನೆ

anil-kumble

ನವದೆಹಲಿ: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಅನಿಲ್ ಕುಂಬ್ಳೆ, ವಾರ್ಷಿಕ 6.25 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ಕುರಿತು ಮಾಹಿತಿ ನೀಡಿದೆ.

ವೆಸ್ಟ್ ಇಂಡೀಸ್ ನಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿಗೆ ಮೊದಲು ಟೀಂ ಇಂಡಿಯಾ ಕೋಚ್ ಆಗಿ ನೇಮಕವಾದ ಅನಿಲ್ ಕುಂಬ್ಳೆ ಬೆಂಗಳೂರಿನಲ್ಲಿ ಯಶಸ್ವಿಯಾಗಿ ತರಬೇತಿ ಶಿಬಿರ ನಡೆಸಿದ್ದರು. ವಿಂಡೀಸ್ ನಲ್ಲಿಯೂ ಭಾರತ ಕ್ರಿಕೆಟ್ ತಂಡ ಯಶಸ್ವಿಯಾಗಲು ಕಾರಣರಾಗಿದ್ದಾರೆ. 1 ವರ್ಷದ ಅವಧಿಗೆ ಟೀಂ ಇಂಡಿಯಾ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರಿಗೆ ಬಿ.ಸಿ.ಸಿ.ಐ.ನಿಂದ ವಾರ್ಷಿಕ 6.25 ಕೋಟಿ ರೂ. ಸಂಭಾವನೆ ನೀಡಲಾಗುವುದು.

ಟೀಂ ಇಂಡಿಯಾ ಕೋಚ್ ಗಳಾಗಿದ್ದ ಗ್ಯಾರಿ ಕರ್ಸ್ಟನ್ ಹಾಗೂ ಡೆಂಕನ್ ಫ್ಲೆಚರ್ ಅವರಿಗೆ ವಾರ್ಷಿಕ 3-4 ಕೋಟಿ ರೂ. ಸಂಭಾವನೆ ನೀಡಲಾಗಿದೆ. ಟೀಂ ಇಂಡಿಯಾ ಮಾಜಿ ನಿರ್ದೇಶಕ ರವಿಶಾಸ್ತ್ರಿ ಅವರು, ವಾರ್ಷಿಕ 7 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...