alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲೂ ಆಸೀಸ್ ಬಗ್ಗು ಬಡಿಯಲು ಭಾರತ ರೆಡಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ, 4 ನೇ ಏಕದಿನ ಪಂದ್ಯವನ್ನೂ ಜಯಿಸಲು ಭಾರತ ತಂಡ ಸಜ್ಜಾಗಿದೆ.

ಈಗಾಗಲೇ 3 ಪಂದ್ಯಗಳನ್ನು ಜಯಿಸಿ ಸರಣಿ ವಶಪಡಿಸಿಕೊಂಡಿರುವ ವಿರಾಟ್ ಕೊಹ್ಲಿ ಪಡೆ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದೆ.

ಕನ್ನಡಿಗ ಕೆ.ಎಲ್. ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಕುಲದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಅಜಿಂಕ್ಯಾ ರೆಹಾನೆ, ರೋಹಿತ್ ಶರ್ಮಾ, ಮನೀಶ್ ಪಾಂಡೆ, ವಿರಾಟ್ ಕೊಹ್ಲಿ ಮಿಂಚು ಹರಿಸಲು ರೆಡಿಯಾಗಿದ್ದಾರೆ.

ಈಗಾಗಲೇ 3 ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡಿರುವ ಆಸ್ಟ್ರೇಲಿಯಾ ಇಂದಿನ ಪಂದ್ಯವನ್ನಾದರೂ ಗೆಲ್ಲಲೇಬೇಕೆಂದು ಕಾರ್ಯತಂತ್ರ ರೂಪಿಸಿದೆ.

ಆಸೀಸ್ ಸ್ಪೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಇಂದು 100 ನೇ ಪಂದ್ಯವನ್ನಾಡಲಿದ್ದಾರೆ. ಬೆಂಗಳೂರಿನಲ್ಲಿ ನಿತ್ಯವೂ ಮಳೆಯಾಗುತ್ತಿದ್ದು, ಪಂದ್ಯದ ಮೇಲೆ ಪರಿಣಾಮ ಬೀರಬಹುದು.

ಕೆಲವೇ ನಿಮಿಷಗಳಲ್ಲಿ ಮೈದಾನದಲ್ಲಿ ಬಿದ್ದ ಮಳೆ ನೀರನ್ನು ಖಾಲಿ ಮಾಡಿ ಪಂದ್ಯವನ್ನಾರಂಭಿಸುವ ವ್ಯವಸ್ಥೆ ಇದೆ. ನಿರಂತರವಾಗಿ ಮಳೆಯಾದರೆ ಪಂದ್ಯಕ್ಕೆ ಅಡ್ಡಿಯಾಗಬಹುದು.

ಮಧ್ಯಾಹ್ನ 1.30 ಕ್ಕೆ ಪಂದ್ಯ ಆರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...