alex Certify
ಕನ್ನಡ ದುನಿಯಾ       Mobile App
       

Kannada Duniya

KKR –ಮುಂಬೈ ನಡುವೆ ಹೈವೋಲ್ಟೇಜ್ ಮ್ಯಾಚ್

ipl-ben-n

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು 2 ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಬಲಿಷ್ಠ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಐ.ಪಿ.ಎಲ್.ನಲ್ಲಿ ಇದುವರೆಗೆ ಮುಂಬೈ ಇಂಡಿಯನ್ಸ್ 3 ಬಾರಿ ಫೈನಲ್ ತಲುಪಿದ್ದರೆ, ಕೋಲ್ಕತ್ತ 2 ಸಲ ಫೈನಲ್ ಪ್ರವೇಶಿಸಿದೆ.

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಸೋತಿದ್ದು, ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯಗಳಿಸಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ತಲಾ 2 ಸಲ ಐ.ಪಿ.ಎಲ್. ಪ್ರಶಸ್ತಿ ಗಳಿಸಿರುವ ಕೋಲ್ಕತ್ತ ಮತ್ತು ಮುಂಬೈ ತಂಡಗಳ ನಡುವೆ ಹೈ ವೋಲ್ಟೇಜ್ ಮ್ಯಾಚ್ ನಡೆಯಲಿದೆ.

ಕೆ.ಕೆ.ಆರ್. ತಂಡದಲ್ಲಿ ಗೌತಮ್ ಗಂಭೀರ್, ಮನೀಶ್ ಪಾಂಡೆ, ರಾಬಿನ್ ಉತ್ತಪ್ಪ, ಕ್ರಿಸ್ ಲಿನ್, ಸುನಿಲ್ ನಾರಾಯಣ್ ನೇಥನ್, ಕಲ್ಟರ್ ನೈಲ್ ಹಾಗೂ ಮುಂಬೈ ಟೀಂನಲ್ಲಿ ಪಾರ್ಥಿವ್ ಪಟೇಲ್, ರೋಹಿತ್ ಶರ್ಮ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ನಿತಿಶ್ ರಾಣಾ ಜೋಸ್ ಬಟ್ಲರ್ ಭರವಸೆಯ ಆಟಗಾರರಾಗಿದ್ದಾರೆ.

ಇಂದಿನ ಪಂದ್ಯದಲ್ಲಿ ವಿಜೇತ ತಂಡ ಫೈನಲ್ ತಲುಪಲಿದ್ದು, ಗೆಲುವಿಗಾಗಿ ಉಭಯ ತಂಡಗಳ ನಾಯಕರು ರಣತಂತ್ರ ರೂಪಿಸಿದ್ದಾರೆ.

Jobs by neuvoo.co.in

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...