alex Certify
ಕನ್ನಡ ದುನಿಯಾ       Mobile App
       

Kannada Duniya

ಧೋನಿ ಬಗ್ಗೆ ಟ್ವೀಟ್ ಮಾಡಿ ನಗೆಪಾಟಲಿಗೀಡಾದ ಕ್ರಿಕೆಟಿಗ

brendon

ನವದೆಹಲಿ: ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್ ಗಳ ಪಂದ್ಯದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಕುರಿತು, ಟ್ವೀಟ್ ಮಾಡಿದ ಕ್ರಿಕೆಟಿಗರೊಬ್ಬರು ನಗೆಪಾಟಲಿಗೀಡಾಗಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಗೆ ನಿವೃತ್ತಿ ಹೇಳಿದ್ದು, ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟೆಸ್ಟ್ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್ ಟೇಲರ್, ಧೋನಿ ನಿವೃತ್ತಿ ಹೊಂದಿದ್ದರಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಏಕದಿನ ಪಂದ್ಯವನ್ನೇ ಟೆಸ್ಟ್ ಎಂದು ಭಾವಿಸಿರುವ ಬ್ರೆಂಡನ್ ಟೇಲರ್, ನಿವೃತ್ತಿ ಹೊಂದಿದ ಧೋನಿ ಹೇಗೆ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ್ದಾರೆ. ಬ್ರೆಂಡನ್ ಟೇಲರ್, ಕ್ರಿಕೆಟ್ ಆಟಗಾರನಾಗಿ ಪೆದ್ದಾಗಿ ವರ್ತಿಸಿದ್ದಾರೆ ಎಂದು ಧೋನಿ ಅಭಿಮಾನಿಗಳು ಹೇಳಿದ್ದಾರೆ. ಇದಾದ ನಂತರದಲ್ಲಿ ಟೇಲರ್ ಸಾರಿ ಕೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...