alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆದ್ದವರಿಗೆ ಸಿಕ್ಕಿದೆ ಈ ಬಹುಮಾನ

ಚಾಮರಾಜನಗರ: ಯಾವುದೇ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಟ್ರೋಫಿ, ನಗದು ಬಹುಮಾನ ನೀಡುವುದು ಸಾಮಾನ್ಯ. ಆದರೆ, ಚಾಮರಾಜನಗರ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಟ್ರೋಫಿ ಬದಲಿಗೆ ಕುರಿ, ಕೋಳಿಗಳನ್ನು ಬಹುಮಾನವಾಗಿ ನೀಡಲಾಗಿದೆ.

ಕೊಳ್ಳೆಗಾಲ ತಾಲ್ಲೂಕಿನ ಹನೂರಿನಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲನೇ ಸ್ಥಾನ ಪಡೆದ ತಂಡಕ್ಕೆ 2 ಕುರಿಗಳನ್ನು ಬಹುಮಾನವಾಗಿ ನೀಡಲಾಗಿದೆ. 2 ನೇ ಸ್ಥಾನ ಪಡೆದ ತಂಡಕ್ಕೆ ನಾಟಿ ಕೋಳಿಗಳು ಬಹುಮಾನವಾಗಿ ಸಿಕ್ಕಿವೆ.

‘ಮ್ಯಾನ್ ಆಫ್ ದಿ ಮ್ಯಾಚ್’ ಪಡೆದ ಆಟಗಾರನಿಗೆ ಮೊಟ್ಟೆಗಳನ್ನು ಕೊಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಇತ್ತೀಚೆಗೆ ಕ್ರಿಕೆಟ್ ಪಂದ್ಯಾವಳಿಗಳು ಹೆಚ್ಚಾಗಿ ನಡೆಯುತ್ತಿವೆ. ಸಾಮಾನ್ಯವಾಗಿ ಎಲ್ಲಾ ಪಂದ್ಯಾವಳಿಗಳಲ್ಲಿ ಟ್ರೋಫಿ, ನಗದು ಬಹುಮಾನ ನೀಡಲಾಗುತ್ತದೆ. ಇದರ ಬದಲಿಗೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಕುರಿ, ಕೋಳಿ ನೀಡಲಾಗಿದೆ ಎಂದು ಪಂದ್ಯಾವಳಿಯ ಆಯೋಜಕರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...