alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಸಿಸಿಐ ಆಡಳಿತ ಉಸ್ತುವಾರಿಗೆ ನಾಲ್ವರ ನೇಮಕ

supreme_court_delhiಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಡಳಿತ ನೋಡಿಕೊಳ್ಳಲು ಸುಪ್ರೀಂ ಕೋರ್ಟ್, ನಾಲ್ಕು ಸದಸ್ಯರ ಸಮಿತಿಯನ್ನು ನೇಮಿಸಿದ್ದು, ಮಾಜಿ ಮಹಾಲೇಖಪಾಲ ವಿನೋದ್ ರಾಯ್ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ.

ಪ್ರಸಿದ್ದ ಇತಿಹಾಸಕಾರ ರಾಮಚಂದ್ರ ಗುಹಾ, ಮೂಲ ಸೌಲಭ್ಯ ಅಭಿವೃದ್ದಿ ಹಣಕಾಸು ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿಕ್ರಂ ಲಿಮಯೆ ಹಾಗೂ ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಡಯನಾ ಎಡುಲ್ಜಿ ಸಮಿತಿಯ ಸದಸ್ಯರಾಗಿದ್ದಾರೆ.

ಬಿಸಿಸಿಐ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಜೋಹ್ರಿ ಅವರೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನೂತನ ಸಮಿತಿಗೆ ಸೂಚನೆ ನೀಡಿದೆ. ಬಿಸಿಸಿಐ ಆಡಳಿತದಲ್ಲಿ ಸಚಿವರು ಹಾಗೂ ಸರ್ಕಾರಿ ಅಧಿಕಾರಿಗಳು ಭಾಗವಹಿಸುವಂತಿಲ್ಲವೆಂದು ಕಳೆದ ವರ್ಷ ನೀಡಿದ್ದ ತೀರ್ಪಿಗೆ ಈಗಲೂ ಬದ್ದವಾಗಿರುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...