alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟಕ್ಕೆ ಸಿಲುಕಿದ ‘ಟೀಮ್ ಇಂಡಿಯಾ’ ಆಟಗಾರರು

tri colours on helmetವಿಶ್ವ ಕಪ್ ಟಿ 20 ಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸೆಮಿ ಫೈನಲ್ ಹಂತ ತಲುಪಿರುವ ಟೀಮ್ ಇಂಡಿಯಾ ಆಟಗಾರರಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ. ‘ಟೀಮ್ ಇಂಡಿಯಾ’ದ ಕೆಲ ಆಟಗಾರರ ವಿರುದ್ದ ಮೊಹಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಉಲ್ಲಾಸ್ ಎಂಬವರು ಈ ದೂರು ಸಲ್ಲಿಸಿದ್ದು, ಟೀಮ್ ಇಂಡಿಯಾ ಆಟಗಾರರು ತಮ್ಮ ಹೆಲ್ಮೆಟ್ ಮೇಲೆ ಭಾರತದ ತ್ರಿವರ್ಣ ಧ್ವಜ ಚಿನ್ಹೆಯನ್ನು ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆಟಗಾರರು ತಮ್ಮ ಹೆಲ್ಮೆಟ್ ಗಳನ್ನು ನೆಲದ ಮೇಲಿಟ್ಟಿರುತ್ತಾರೆ. ಕೆಲವೊಮ್ಮೆ ಮೈದಾನದಲ್ಲೇ ಆಟಗಾರರು ಉಗುಳುತ್ತಾರೆ ಎಂದು ಉಲ್ಲಾಸ್ ಹೇಳಿದ್ದಾರೆ.

ಟೀಮ್ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಹೊರತುಪಡಿಸಿ ವಿರಾಟ್ ಕೊಹ್ಲಿ ಸೇರಿದಂತೆ ಉಳಿದೆಲ್ಲ ಆಟಗಾರರು ತಮ್ಮ ಹೆಲ್ಮೆಟ್ ಮೇಲೆ ತ್ರಿವರ್ಣ ಧ್ವಜದ ಚಿನ್ಹೆಯನ್ನು ಬಳಸುತ್ತಾರೆನ್ನಲಾಗಿದೆ. ಕೋಲ್ಕತ್ತಾದಲ್ಲಿ ನಡೆದ ಭಾರತ- ಪಾಕ್ ಪಂದ್ಯದ ವೇಳೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ರಾಷ್ಟ್ರ ಗೀತೆ ಹಾಡಲು ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡಿದ್ದಾರೆಂದು ಆರೋಪಿಸಿ ಉಲ್ಲಾಸ್ ಈ ಹಿಂದೆ ದೂರು ನೀಡುವ ಮೂಲಕ ಸುದ್ದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...