alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಇಂಡಿಯಾ- ಪಾಕ್ ಹೈ ವೋಲ್ಟೇಜ್ ಮ್ಯಾಚ್!

cricket

ಢಾಕಾ; ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಶನಿವಾರ ಟಿ-20 ಪಂದ್ಯ ನಡೆಯಲಿದೆ. ಏಷ್ಯಾ ಕಪ್ ಟಿ-20 ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಹೆಚ್ಚಾಗಿದೆ.

ಬಾಂಗ್ಲಾ ಎದುರು ನಡೆದ ಮೊದಲ ಪಂದ್ಯದಲ್ಲಿ ಜಯಗಳಿಸಿ ವಿಶ್ವಾಸದಲ್ಲಿರುವ ಭಾರತ ತಂಡದ ಆಟಗಾರರು ನಾಳಿನ ಪಂದ್ಯವನ್ನು ಎದುರು ನೋಡುತ್ತಿದ್ದಾರೆ. ಫೈನಲ್ ಗಿಂತ ಪ್ರಮುಖ ಪಂದ್ಯ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಪಾಕ್ ತಂಡದ ವಿರುದ್ಧ ಗೆಲ್ಲಲು ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಕಾರ್ಯತಂತ್ರ ರೂಪಿಸಿದ್ದಾರೆ. 2015ರಲ್ಲಿ ನಡೆದ ಏಕದಿನ ವಿಶ್ವಕಪ್ ನಲ್ಲಿ ಭಾರತ ತಂಡದ ಎದುರು ಸೋಲು ಕಂಡಿದ್ದ ಪಾಕ್ ಒಂದು ವರ್ಷದ ನಂತರ ಮುಖಾಮುಖಿಯಾಗುತ್ತಿದೆ.

ಮತ್ತೊಂದು ಸಂಗತಿ ಎಂದರೆ ಭಾರತದ ಆತಿಥ್ಯದಲ್ಲಿ ನಡೆಯುವ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್ ತಿಳಿಸಿದ್ದಾರೆ. ಪಾಕ್ ತಂಡಕ್ಕೆ ಭದ್ರತೆ ಒದಗಿಸಬೇಕು. ಪಂದ್ಯ ವೀಕ್ಷಣೆಗೆ ಬರುವ ಅಭಿಮಾನಿಗಳಿಗೆ ವೀಸಾ ವ್ಯವಸ್ಥೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...