alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀಲಂಕಾ ವಿರುದ್ಧ ಪಂದ್ಯದ ಜೊತೆ ಟೆಸ್ಟ್ ಸರಣಿ ಗೆದ್ದ ಇಂಡಿಯಾ

kohli-jadeja-twitter

ಶ್ರೀಲಂಕಾದಲ್ಲಿ ನಡೆಯುತ್ತಿರುವ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿದೆ. ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಪಡೆ ಜಯಭೇರಿ ಬಾರಿಸಿದೆ. ಭಾನುವಾರ 53 ರನ್ ಗಳಿಂದ ಶ್ರೀಲಂಕಾ ಸೋಲುಂಡಿದೆ.

ಇದ್ರ ಜೊತೆಗೆ ಕಳೆದ ಎರಡು ವರ್ಷಗಳಲ್ಲಿ ಶ್ರೀಲಂಕಾ ಪ್ರವಾಸದಲ್ಲಿ ಎರಡು ಬಾರಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಇತಿಹಾಸ ಬರೆದಿದೆ. ಇಷ್ಟೇ ಅಲ್ಲ ವಿರಾಟ್ ಟೀಂ ಕಳೆದ ಎರಡು ವರ್ಷಗಳಲ್ಲಿ 8ನೇ ಟೆಸ್ಟ್ ಸರಣಿ ಗೆದ್ದಿದೆ.

ಎರಡನೇ ಟೆಸ್ಟ್ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 622 ರನ್ ಗಳಿಸಿತ್ತು. ಗುರಿ ಬೆನ್ನು ಹತ್ತಿದ ಶ್ರೀಲಂಕಾ ಪಡೆ 183 ರನ್ ಗಳಿಗೆ ತನ್ನೆಲ್ಲ ವಿಕೆಟ್ ಒಪ್ಪಿಸಿತ್ತು. ನಂತ್ರ ಟೀಂ ಇಂಡಿಯಾ ಫಾಲೋ ಆನ್ ಹೇರಿತ್ತು. ಮತ್ತೆ ಬ್ಯಾಟ್ ಮಾಡಿದ ಶ್ರೀಲಂಕಾ ಮೂರನೇ ದಿನ 2 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತ್ತು. ಆದ್ರೆ ನಾಲ್ಕನೇ ದಿನ ಟೀಂ ಇಂಡಿಯಾ ಮುಂದೆ ಮಂಡಿಯೂರಿದೆ. ಕೇವಲ 386 ರನ್ ಗಳಿಸಿದ ಶ್ರೀಲಂಕಾ ಸರಣಿ ಕೈ ಚೆಲ್ಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...