alex Certify
ಕನ್ನಡ ದುನಿಯಾ       Mobile App
       

Kannada Duniya

ಟಾಸ್ ಗೆದ್ದ ಸನ್ ರೈಸರ್ಸ್ ಬ್ಯಾಟಿಂಗ್

RCB-vs-SRH-Final-Match

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 9ನೇ ಆವೃತ್ತಿಯ ಫೈನಲ್ ಪಂದ್ಯ ಆರಂಭವಾಗಿದೆ. ಕ್ರಿಕೆಟ್ ಹಬ್ಬದಲ್ಲಿ ಪ್ರಶಸ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್ ಸೆಣಸಾಟ ಆರಂಭವಾಗಿದೆ.

ಬ್ಯಾಟಿಂಗ್ ಬಲವನ್ನೇ ನೆಚ್ಚಿಕೊಂಡಿರುವ ಆರ್.ಸಿ.ಬಿ. ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸಮಬಲದಂತೆ ಕಂಡು ಬಂದರೂ, ಇದುವರೆಗೂ ಉಭಯತಂಡಗಳು 8 ಸಲ ಮುಖಾಮುಖಿಯಾಗಿದ್ದು, ಆರ್.ಸಿ.ಬಿ. 4 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಸನ್ ರೈಸರ್ಸ್ ಹೈದರಾಬಾದ್ 3 ಸಲ ಗೆಲುವು ಸಾಧಿಸಿದ್ದರೆ, ಒಂದು ಪಂದ್ಯ ಟೈ ಆಗಿದೆ. ಡೇವಿಡ್ ವಾರ್ನರ್ ಹಾಗೂ ವಿರಾಟ್ ಕೊಹ್ಲಿ ನಾಯಕರಾಗಿ ತಮ್ಮ ತಂಡಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈ ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸವಾಲಿನ ಗುರಿ ನೀಡಲು ಮುಂದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...