alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ-ಪಾಕ್ ಕ್ರಿಕೆಟ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿ…!

dharamshala crket

ನವದೆಹಲಿ: ವಿಶ್ವಕಪ್ ಟಿ-20 ಪಂದ್ಯಾವಳಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ನಡೆಯುವ ಬಗ್ಗೆ ಇದ್ದ ಗೊಂದಲ ಬಗೆಹರಿದಿದ್ದು, ನಿಗದಿಯಂತೆಯೇ ಧರ್ಮಶಾಲಾದಲ್ಲಿ ಟಿ-20 ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಧರ್ಮಶಾಲಾದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆದರೆ ಭದ್ರತೆ ಒದಗಿಸುವುದು ಕಷ್ಟ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಹೇಳಿದ್ದರಿಂದ ಭಾರತ ಹಾಗೂ ಪಾಕಿಸ್ತಾನ ತಂಡಗಳ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಬೇರೆ ತಂಡಗಳೊಂದಿಗೆ ಬೇಕಾದರೆ ಪಂದ್ಯ ಆಯೋಜಿಸಿ, ಪಾಕ್ ನೊಂದಿಗೆ ಪಂದ್ಯ ಆಯೋಜಿಸಿದರೆ, ಭದ್ರತೆಗೆ ಕಷ್ಟವಾಗುತ್ತದೆ ಎಂದು ಹಿಮಾಚಲ ಸಿಎಂ ಹೇಳಿದ್ದರು. ಇದಾದ ನಂತರದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಧರ್ಮಶಾಲಾಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರತಿನಿಧಿಗಳು ಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರಿಂದ, ಬಿಸಿಸಿಐ ಈ ಬಗ್ಗೆ ಕ್ರಮ ಕೈಗೊಂಡು ಕೇಂದ್ರ ಹಾಗೂ ಹಿಮಾಚಲ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿದೆ. ಅದರಂತೆ ನಿಗದಿಯಂತೆಯೇ ಮಾರ್ಚ್ 19 ರಂದು ಧರ್ಮಶಾಲಾದಲ್ಲಿ ಸೂಕ್ತ ಭದ್ರತೆಯೊಂದಿಗೆ ಭಾರತ ಹಾಗೂ ಪಾಕ್ ತಂಡಗಳ ನಡುವೆ ಪಂದ್ಯ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈ ವೋಲ್ಟೇಜ್ ಮ್ಯಾಚ್ ಮಾರ್ಚ್ 19ರಂದು ನಡೆಯಲಿದ್ದು, ಪಂದ್ಯ ನಡೆಯುವ ಬಗ್ಗೆ ಇದ್ದ ಗೊಂದಲಗಳೆಲ್ಲಾ ಬಗೆಹರಿದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...