alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಬಾರಿ ವರ್ಲ್ಡ್ ಕಪ್ ನಲ್ಲಿ ಜಿದ್ದಾಜಿದ್ದಿ ಹೋರಾಟ ಮಿಸ್..!

india-1

ಕ್ರಿಕೆಟ್ ಅಭಿಮಾನಿಗಳಿಗೊಂದು ಬೇಸರದ ಸಂಗತಿ. ಮುಂದಿನ ತಿಂಗಳು ಆರಂಭವಾಗಲಿರುವ  ಟಿ-20 ವರ್ಲ್ಡ್ ಕಪ್ ನಲ್ಲಿ ಭಾರತ-ಪಾಕ್ ತಂಡಗಳ ಜಿದ್ದಾಜಿದ್ದಿ ಹೋರಾಟವನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುವ ಸಾಧ್ಯತೆ ಇದೆ. 20-20 ವರ್ಲ್ಡ್ ಕಪ್ ನಲ್ಲಿ ಪಾಕಿಸ್ತಾನ ಟೀಮ್ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಇದೆ.

ಮೂಲಗಳ ಪ್ರಕಾರ ಪಾಕಿಸ್ತಾನ ಸರ್ಕಾರ, ಪಾಕ್ ಕ್ರಿಕೆಟ್ ತಂಡಕ್ಕೆ ಭದ್ರತೆ ನೀಡಲು ನಿರಾಕರಿಸಿದೆ. ಹೀಗಾಗಿ ಪಿಸಿಬಿ ಪಾಕಿಸ್ತಾನದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ನಡೆಸುವಂತೆ ಐಸಿಸಿ ಮುಂದೆ ಬೇಡಿಕೆ ಇಟ್ಟಿದೆ. ಶಿವಸೇನೆ ಬೆದರಿಕೆ ಹಿನ್ನೆಲೆಯಲ್ಲಿ ಭಾರತ ಬಿಟ್ಟು ಬೇರೆ ಸ್ಥಳದಲ್ಲಿ ಪಂದ್ಯ ನಡೆಸುವಂತೆ ಪಿಸಿಬಿ ಹೇಳಿದೆ ಎನ್ನಲಾಗಿದೆ.

ಈವರೆಗೂ ಪಿಸಿಬಿ ಬೇಡಿಕೆಗೆ ಐಸಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದುಬೈನಲ್ಲಿ ನಡೆದ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿಲ್ಲ. ಈ ನಡುವೆ ಪಾಕಿಸ್ತಾನಿ ಟೀಂ ಸದಸ್ಯರ ಹೆಸರು ಕಳುಹಿಸುವಂತೆ ಐಸಿಸಿ, ಪಿಸಿಬಿಗೆ ಎರಡು ದಿನಗಳ ಅವಕಾಶ ನೀಡಿತ್ತು. ಅದು ಇಂದು ಕೊನೆಗೊಳ್ಳಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...