alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಗಾಯಗೊಂಡ್ರು ಕ್ರಿಕೆಟರ್ ಶಾರ್ದೂಲ್ ಠಾಕೂರ್ ಪೋಷಕರು

ಮುಂಬೈ: ಭಾರತ ಕ್ರಿಕೆಟ್ ತಂಡದ ಆಟಗಾರ ಶಾರ್ದೂಲ್ ಠಾಕೂರ್ ಅವರ ಪೋಷಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಶಾರ್ದೂಲ್ ಠಾಕೂರ್ ಅವರ ತಂದೆ ನರೇಂದ್ರ ಠಾಕೂರ್, ತಾಯಿ ಹಂಸ ಠಾಕೂರ್ ಅವರು ಮೋಟರ್ ಸೈಕಲ್ ನಲ್ಲಿ ಹೋಗುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ಮುಂಬೈ ಸಮೀಪದ ಪಾಲ್ಘಾರ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ದ್ವಿಚಕ್ರವಾಹನದಲ್ಲಿ ಹೋಗುವಾಗ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಪಾಲ್ಘಾರ್ ದ್ವಾಲೆ ಆಸ್ಪತ್ರೆಗೆ ಸೇರಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾರ್ದೂಲ್ ಠಾಕೂರ್ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡುತ್ತಿದ್ದಾರೆ. ಅವರನ್ನು ಐ.ಪಿ.ಎಲ್. ಹರಾಜಿನಲ್ಲಿ 2.60 ಕೋಟಿ ರೂ.ಗೆ ಚೆನ್ನೈ ತಂಡ ಖರೀದಿಸಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...