alex Certify
ಕನ್ನಡ ದುನಿಯಾ       Mobile App
       

Kannada Duniya

ಚಿನ್ನದ ಹುಡುಗಿಗೆ ತವರಿನಲ್ಲಿ ಅದ್ದೂರಿ ಸ್ವಾಗತ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಟೇಬಲ್ ಟೆನ್ನಿಸ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಮನಿಕಾ ಬಾತ್ರಾ ತವರಿಗೆ ಮರಳಿದ್ದಾರೆ.

ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ಭರ್ಜರಿ ಸ್ವಾಗತ ಕೋರಲಾಯ್ತು. ಯಾವುದೇ ಸೂಪರ್ ಸ್ಟಾರ್ ಗೆ ಕಮ್ಮಿಯಿಲ್ಲದಂತೆ ಹೂವಿನ ಹಾರದೊಂದಿಗೆ ಸ್ವಾಗತಿಸಿ ಘೋಷಣೆ ಕೂಗಿ ಬರಮಾಡಿಕೊಳ್ಳಲಾಯ್ತು.

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಜೊತೆಗೆ ಒಂದು ಬೆಳ್ಳಿ ಹಾಗೂ ಕಂಚಿನ ಪದಕವನ್ನೂ ತಮ್ಮದಾಗಿಸಿಕೊಂಡಿರುವ ಮನಿಕಾ, ತನಗೆ ತುಂಬಾ ತುಂಬಾ ಖುಷಿಯಾಗಿದೆ. ತನ್ನ ಪ್ರದರ್ಶನ ತೃಪ್ತಿ ತಂದಿದೆ. ತಾನು ಯಾವಾಗಲೂ ಚಿನ್ನವನ್ನೇ ಗೆಲ್ಲಲು ಬಯಸುತ್ತೇನೆ ಎಂದರು.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...