alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಟ್ರೇಲಿಯಾ ತಂಡದ ಕೋಚ್ ಡರೇನ್ ಲೆಹ್ಮನ್ ರಾಜೀನಾಮೆ

ಜೋಹಾನ್ಸ್ ಬರ್ಗ್: ಆಟಗಾರರು ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೋಚ್ ಡರೇನ್ ಲೆಹ್ಮನ್ ರಾಜೀನಾಮೆ ನೀಡಿದ್ದಾರೆ.

ಜೋಹಾನ್ಸ್ ಬರ್ಗ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರವನ್ನು ಲೆಹ್ಮನ್ ಪ್ರಕಟಿಸಿದ್ದಾರೆ. ಚೆಂಡು ವಿರೂಪಗೊಳಿಸಿದ ಪ್ರಕರಣ ತಾವು ಕೋಚ್ ಆಗಿದ್ದ ಸಂದರ್ಭದಲ್ಲಿಯೇ ನಡೆದಿರುವುದು ನೋವು ತಂದಿದೆ ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ತಮ್ಮ ತೀರ್ಮಾನವನ್ನು ಅವರು ಪ್ರಕಟಿಸಿದ್ದಾರೆ.

ಜೋಹಾನ್ಸ್ ಬರ್ಗ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 4 ನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಪಂದ್ಯ ಮುಗಿದ ಬಳಿಕ ತಂಡದ ಕೋಚ್ ಹುದ್ದೆಯಿಂದ ನಿರ್ಗಮಿಸಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಆಟಗಾರರು ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಕೋಚ್ ಡರೇನ್ ಲೆಹ್ಮನ್ ಅವರ ಯಾವ ಪಾತ್ರವೂ ಇಲ್ಲವೆಂದು ಕ್ರಿಕೆಟ್ ಆಸ್ಟ್ರೇಲಿಯಾ ಕ್ಲೀನ್ ಚಿಟ್ ನೀಡಿದ್ದು, ಹುದ್ದೆಯಲ್ಲಿ ಮುಂದುವರೆಯಲು ಸೂಚಿಸಿದೆ. 2019 ರ ವರೆಗೂ ಲೆಹ್ಮನ್ ಅವರ ಅವಧಿ ಇದೆ. ಆದರೆ, ಲೆಹ್ಮನ್ ಅವರೇ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದು, ಕೋಚ್ ಹುದ್ದೆಯಿಂದ ನಿರ್ಗಮಿಸುವುದಾಗಿ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...