alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿ ಜಿಂಟಾಗೆ ಹೊಸ ಸಾರಥಿ ಸಾಥ್

preethi miller

ಬಾಲಿವುಡ್ ಬೆಡಗಿ ಪ್ರೀತಿ ಜಿಂಟಾ ಇತ್ತೀಚೆಗೆ ಸಿನಿಮಾಕ್ಕಿಂತ ಕ್ರೀಡೆಗೆ ಹೆಚ್ಚಿನ ಒತ್ತು ಕೊಡುತ್ತಿದ್ದಾರೆ. ಅವರ ಮಾಲೀಕತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಐಪಿಎಲ್ ನಲ್ಲಿ ಭರ್ಜರಿ ಪರ್ ಫಾರ್ಮೆನ್ಸ್ ತೋರಿದ್ದು ಖುಷಿ ಹೆಚ್ಚಾಗುವಂತೆ ಮಾಡಿದೆ.

ಐಪಿಎಲ್ 9ನೇ ಆವೃತ್ತಿಯ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಆಟಗಾರರ ಹರಾಜು ಪ್ರಕ್ರಿಯೆ ಕೂಡ ನಡೆದಿದೆ. ಐಪಿಎಲ್ 9ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಸಾರಥ್ಯವನ್ನು ಸೌತ್ ಆಫ್ರಿಕಾ ಆಟಗಾರ ಡೇವಿಡ್ ಮಿಲ್ಲರ್ ಅವರಿಗೆ ವಹಿಸಲಾಗಿದೆ. ಡೇವಿಡ್ ಮಿಲ್ಲರ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಪ್ರೀತಿ ಜಿಂಟಾ, ಅವರಿಗೆ ತಂಡದ ಜವಾಬ್ದಾರಿಯನ್ನು ವಹಿಸಿದ್ದಾರೆ. ಪಂಜಾಬ್ ತಂಡದ ಕೋಚ್ ಸಂಜಯ್ ಬಂಗಾರ್, ಡೇವಿಡ್ ಮಿಲ್ಲರ್ ಉತ್ತಮ ಆಟಗಾರರಾಗಿದ್ದು, ಒತ್ತಡದ ಸಂದರ್ಭಗಳನ್ನು ಸುಲಭವಾಗಿ ನಿರ್ವಹಣೆ ಮಾಡುವ ಛಾತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಪಂಜಾಬ್ ತಂಡದ ಸಾರಥ್ಯ ವಹಿಸಿಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಡೇವಿಡ್ ಮಿಲ್ಲರ್, ತಂಡದಲ್ಲಿ ಸಾಕಷ್ಟು ಪ್ರತಿಭಾನ್ವಿತ ಆಟಗಾರರಿದ್ದು, ತಮಗೆ ನಾಯಕತ್ವ ವಹಿಸಿರುವುದು ಸಂತಸ ತಂದಿದೆ. 9ನೇ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...