alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 4 ಕ್ರೀಡಾಪಟುಗಳ ದುರ್ಮರಣ

ನವದೆಹಲಿ: ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಭೀಕರ ಅಪಘಾತಕ್ಕೆ ಕಾರಣವಾಗಿದೆ. ದೆಹಲಿ –ಪಾಣಿಪತ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಾಲ್ವರು ಕ್ರೀಡಾಪಟುಗಳು ಸಾವನ್ನಪ್ಪಿದ್ದಾರೆ.

ರಾಜಧಾನಿಯಲ್ಲಿ ಮಂಜು ಮುಸುಕಿದ ವಾತಾವರಣ ಇದ್ದು, ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ನಾಲ್ವರು ಕ್ರೀಡಾಪಟುಗಳು ಸಾವು ಕಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...