alex Certify
ಕನ್ನಡ ದುನಿಯಾ       Mobile App
       

Kannada Duniya

ಪುಣೆ ವಿರುದ್ಧ ಡೆಲ್ಲಿಗೆ 7 ರನ್ ಜಯ

delhi

ನವದೆಹಲಿ: ಪ್ರಸಕ್ತ ಸಾಲಿನ ಐ.ಪಿ.ಎಲ್.ನಲ್ಲಿ ಬ್ಯಾಟಿಂಗ್ ವೈಫಲ್ಯ ಎದುರಿಸಿದ್ದ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕರುಣ್ ನಾಯರ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ 7 ರನ್ ಗಳ ಅಂತರದಿಂದ ಜಯಗಳಿಸಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಸಂಜು ಸ್ಯಾಮ್ಸನ್ 2, ಕರುಣ್ ನಾಯರ್ 64, ರಿಶಬ್ ಪಂತ್ 36, ಸ್ಯಾಮುಯೆಲ್ 27 ಪ್ಯಾಟ್ ಕಮಿನ್ಸ್ 11 ಅಮಿತ್ ಮಿಶ್ರಾ 13 ರನ್ ಗಳಿಸಿದ್ದಾರೆ. ಪುಣೆ ಪರವಾಗಿ ಜೈದೇವ್ 2, ಬೆನ್ ಸ್ಟೋಕ್ಸ್ 2 ವಿಕೆಟ್ ಪಡೆದರು.

169 ಗೆಲುವಿನ ಗುರಿ ಪಡೆದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಲಷ್ಟೇ ಶಕ್ತವಾಯಿತು.

ಸ್ಟೀವನ್ ಸ್ಮಿತ್ 38, ಮನೋಜ್ ತಿವಾರಿ 64, ಬೆನ್ ಸ್ಟೋಕ್ಸ್ 33 ರನ್ ಗಳಿಸಿದರು. ಡೆಲ್ಲಿ ಪರ ಜಹೀರ್ ಖಾನ್, ಮೊಹಮ್ಮದ್ ಶಮಿ ತಲಾ 2 ವಿಕೆಟ್ ಪಡೆದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...