alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಅರ್ಧ ಶತಕ, ಕೊನೆಗೂ ಗೆದ್ದ RCB

koli-rcb

ನವದೆಹಲಿ: ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ 10 ರನ್ ಗಳ ಅಂತರದಿಂದ ಜಯಗಳಿಸಿದೆ.

ವಿರಾಟ್ ಕೊಹ್ಲಿ 58, ಕ್ರಿಸ್ ಗೇಲ್ 48 ರನ್ ಗಳಿಸಿದ್ದು, ಐ.ಪಿ.ಎಲ್. 10 ನೇ ಆವೃತ್ತಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಆರ್.ಸಿ.ಬಿ. ಗೆಲುವು ಕಂಡಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಆರ್.ಸಿ.ಬಿ. ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿತು. ಡೆಲ್ಲಿ ಪರವಾಗಿ ಪ್ಯಾಟ್ ಕಮಿನ್ಸ್ ಹಾಗೂ ಜಹೀರ್ ಖಾನ್ ತಲಾ 1 ವಿಕೆಟ್ ಪಡೆದರು.

162 ರನ್ ಗೆಲುವಿನ ಗುರಿ ಪಡೆದ ಡೆಲ್ಲಿ ಡೇರ್ ಡೆವಿಲ್ಸ್ 20 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 151 ರನ್ ಗಳಿಸಿ ಸೋಲು ಕಂಡಿದೆ.

ಕರುಣ್ ನಾಯರ್ 26, ಶ್ರೇಯಸ್ ಅಯ್ಯರ್ 32, ರಿಶಬ್ ಪಂತ್ 45 ರನ್ ಗಳಿಸಿದರು. ಆರ್.ಸಿ.ಬಿ ಪರವಾಗಿ ಹರ್ಷಲ್ ಪಟೇಲ್ 3, ಟ್ರಾವಿಸ್ ಹೆಡ್ 2 ಪವನ್ ನೇಗಿ 3 ವಿಕೆಟ್ ಪಡೆದು ಗಮನ ಸೆಳೆದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...