alex Certify
ಕನ್ನಡ ದುನಿಯಾ       Mobile App
       

Kannada Duniya

ಒಲಂಪಿಕ್ಸ್ ನಲ್ಲಿ ಬಂಗಾರ ಗೆದ್ರೆ ಈ ಸರ್ಕಾರ ನೀಡಲಿದೆ 3 ಕೋಟಿ ರೂ.

ದೆಹಲಿ ಸರ್ಕಾರ ಆಟಗಾರರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಒಲಂಪಿಕ್ಸ್ ಹಾಗೂ ಪ್ಯಾರಾ ಒಲಂಪಿಕ್ಸ್ ನಲ್ಲಿ ಪದಕ ಗೆದ್ದ ಆಟಗಾರರ ಬಹುಮಾನ ಮೊತ್ತವನ್ನು ಏರಿಸುವ ನಿರ್ಧಾರ ಕೈಗೊಂಡಿದೆ. ದೆಹಲಿ ಆಟಗಾರರು ಒಲಂಪಿಕ್ಸ್ ನಲ್ಲಿ ಬಂಗಾರದ ಪದಕ ಗೆದ್ರೆ ಸರ್ಕಾರ 3 ಕೋಟಿ ರೂಪಾಯಿ ಬಹುಮಾನ ನೀಡಿ ಸನ್ಮಾನಿಸಲಿದೆ.

ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಟ್ವೀಟರ್ ಮೂಲಕ ಈ ವಿಷ್ಯವನ್ನು ತಿಳಿಸಿದ್ದಾರೆ. ದೆಹಲಿ ಆಟಗಾರರಿಗೆ ಖುಷಿ ಸುದ್ದಿ. ಕ್ಯಾಬಿನೆಟ್ ನಲ್ಲಿ ಆಟಗಾರರ ಬಹುಮಾನ ಮೊತ್ತ ಏರಿಕೆಗೆ ಒಪ್ಪಿಗೆ ಸಿಕ್ಕಿದೆ. ಒಲಂಪಿಕ್ಸ್ ನಲ್ಲಿ ಬಂಗಾರದ ಪದಕ ಗೆದ್ರೆ 3 ಕೋಟಿ ರೂಪಾಯಿ ಬಹುಮಾನ ನೀಡಲಿದೆ. ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಹಾಗೂ ಕಂಚು ಗೆದ್ದವರಿಗೆ 1 ಕೋಟಿ ಬಹುಮಾನ ನೀಡಲಿದೆ ಎಂದು ಟ್ವಿಟ್ ಮಾಡಿದ್ದಾರೆ.

ಇದೇ ರೀತಿ ಏಷ್ಯನ್ ಗೇಮ್ಸ್ ನಲ್ಲಿ ಬಂಗಾರದ ಪದಕ ಗೆದ್ದ ದೆಹಲಿ ಆಟಗಾರರಿಗೆ 1 ಕೋಟಿ ರೂಪಾಯಿ ನೀಡಲಿದೆಯಂತೆ. ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ಹಾಗೂ ಕಂಚು ಗೆದ್ದ ಆಟಗಾರರಿಗೆ 50 ಲಕ್ಷ ರೂಪಾಯಿ ನೀಡಲಿದೆಯಂತೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...