alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಮ್ಯಾಚ್ ಫಿಕ್ಸಿಂಗ್ ನಲ್ಲಿ ಧೋನಿ..?

Mahendra_Singh_Dhoni

ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ 2014ರಲ್ಲಿ ಮ್ಯಾಂಚೆಸ್ಟರ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಧೋನಿ ಮ್ಯಾಚ್ ಫಿಕ್ಸಿಂಗ್ ನಡೆಸಿದ್ದರು.

ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ವ್ಯವಸ್ಥಾಪಕ ಸುನಿಲ್ ದೇವ್ ಅವರು ಈ ರೀತಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿಯೂ ಆಗಿರುವ ಸುನಿಲ್ ದೇವ್ ಅವರು ರಹಸ್ಯ ಕಾರ್ಯಾಚರಣೆಯೊಂದರಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಹಿಂದಿ ದೈನಿಕವೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಸುನಿಲ್ ದೇವ್ ಈ ಮಾಹಿತಿ ನೀಡಿದ್ದು, ಮ್ಯಾಂಚೆಸ್ಟರ್ ನಲ್ಲಿ ಪಂದ್ಯ ಆರಂಭವಾಗುವ ಮೊದಲು ಮಳೆ ಬಂದಿದ್ದ ಕಾರಣ ಟಾಸ್ ಗೆದ್ದರೆ ಬೌಲಿಂಗ್ ಆಯ್ದುಕೊಳ್ಳಲು ತಂಡದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು ಎಂದಿದ್ದಾರೆ.

ಆದರೆ, ಟಾಸ್ ಗೆದ್ದರೂ ಕೂಡ, ಧೋನಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಧೋನಿಯ ಈ ನಡೆ ತಂಡದ ತಂಡದ ಆಟಗಾರರಿಗೆ ಮಾತ್ರವಲ್ಲ, ಕಾಮೆಂಟರಿ ಹೇಳುತ್ತಿದ್ದ ಇಂಗ್ಲೆಂಡ್ ಮಾಜಿ ನಾಯಕ ಜೆಫ್ರಿ ಬಾಯ್ಕಟ್ ಕೂಡ ಅಚ್ಚರಿ ವ್ಯಕ್ತಪಡಿಸಿದ್ದರು. ಇದು ಮ್ಯಾಚ್ ಫಿಕ್ಸಿಂಗ್ ಎಂಬುದಂತೂ ಸತ್ಯ ಎಂದು ಸುನಿಲ್ ದೇವ್ ಹೇಳಿದ್ದಾರೆ ಎನ್ನಲಾಗಿದೆ. ರಹಸ್ಯ ಕಾರ್ಯಾಚರಣೆಯ ಸಂದರ್ಭದಲ್ಲಿ ಸುನಿಲ್, ನಾನೀಗ ಹೇಳಿರುವ ಮಾಹಿತಿ ರೆಕಾರ್ಡ್ ಮಾಡಿದರೆ, ನನ್ನ ಹೇಳಿಕೆಯನ್ನು ಅಲ್ಲಗಳೆಯುತ್ತೇನೆ ಎಂದೂ ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...