alex Certify
ಕನ್ನಡ ದುನಿಯಾ       Mobile App
       

Kannada Duniya

ಧೋನಿ ಅಭಿಮಾನಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ

ಟೀಂ ಇಂಡಿಯಾ ವಿಕೆಟ್ ಕೀಪರ್ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೊಂದು ಖುಷಿ ಸುದ್ದಿ. ನಿಮ್ಮ ನಾಯಕನನ್ನು ಮತ್ತೆ ಹಳೆ ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ನೋಡಬಹುದಾಗಿದೆ. ಬುಧವಾರ ಸಭೆ ನಡೆಸಿದ ಐಪಿಎಲ್ ಆಡಳಿತ ಮಂಡಳಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದೆ.

ಎರಡು ವರ್ಷಗಳ ಕಾಲ ಐಪಿಎಲ್ ನಿಂದ ಹೊರಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ 2018ರ ಐಪಿಎಲ್ ಸರಣಿಗೆ ವಾಪಸ್ ಆಗ್ತಿದೆ. ಈ ವೇಳೆ ತಂಡ ತನ್ನ ಹಳೆಯ 5 ಆಟಗಾರರನ್ನು ಖರೀದಿ ಮಾಡಬಹುದೆಂದು ಐಪಿಎಲ್ ಆಡಳಿತ ಮಂಡಳಿ ಹೇಳಿದೆ.

ಈ ಎರಡೂ ತಂಡಗಳು ತಮ್ಮ ಹಳೆಯ ಮೂರು ಭಾರತೀಯ ಹಾಗೂ ಎರಡು ವಿದೇಶಿ ಆಟಗಾರರನ್ನು ಖರೀದಿ ಮಾಡಬಹುದಾಗಿದೆ. ಐಪಿಎಲ್ ನಲ್ಲಿ ಪ್ರತಿಯೊಂದು ತಂಡ 25 ಆಟಗಾರರನ್ನು ಖರೀದಿ ಮಾಡಬಹುದಾಗಿದೆ. ಅದ್ರಲ್ಲಿ 17 ಭಾರತೀಯರಾದ್ರೆ 8 ವಿದೇಶಿ ಆಟಗಾರರಿಗೆ ಅವಕಾಶವಿರುತ್ತದೆ.

2013ರಲ್ಲಿ ಸ್ಪಾಟ್ ಫಿಕ್ಸಿಂಗ್ ವಿವಾದದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡ ಐಪಿಎಲ್ ನಿಂದ ಅಮಾನತುಗೊಂಡಿತ್ತು. ಎರಡು ವರ್ಷಗಳ ನಂತ್ರ ಮತ್ತೆ ವಾಪಸ್ ಬರ್ತಿದೆ. ಇದಾದ ನಂತ್ರ ಚೆನೈ ತಂಡದ ನಾಯಕರಾಗಿದ್ದ ಧೋನಿ ಪುಣೆ ಪರ ಆಟವಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...