alex Certify
ಕನ್ನಡ ದುನಿಯಾ       Mobile App
       

Kannada Duniya

ಫುಟ್ಬಾಲ್ ಆಟಗಾರನ ಜೊತೆ ಫೋಟೋ ತೆಗೆಸಿಕೊಳ್ಳಲಾಗದ್ದಕ್ಕೆ ಈತ ಮಾಡಿದ್ದೇನು..?

421013-messi

ಖ್ಯಾತ ಫುಟ್ಬಾಲ್ ಆಟಗಾರರೊಬ್ಬರ ಪಾಸ್ ಪೋರ್ಟ್ ಅನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಪೊಲೀಸ್ ಅಧಿಕಾರಿ ಅದನ್ನು ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ ಕಾರಣಕ್ಕಾಗಿ ಕೆಲಸ ಕಳೆದುಕೊಂಡಿದ್ದಲ್ಲದೇ ಜೈಲು ಕಂಬಿಯನ್ನೂ ಎಣಿಸುವಂತಾಗಿದೆ.

ಕಳೆದ ವರ್ಷದ ಡಿಸೆಂಬರ್ ನಲ್ಲಿ ದುಬೈನಲ್ಲಿ ಈ ಘಟನೆ ನಡೆದಿದ್ದು, ಖ್ಯಾತ ಫುಟ್ಬಾಲ್ ಆಟಗಾರ ಅರ್ಜೈಂಟಿನಾದ ಲಿಯೋನೆಲ್ ಮೆಸ್ಸಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ಈ ವೇಳೆ ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮೆಸ್ಸಿಯವರೊಂದಿಗೆ ತನ್ನ ಮೊಬೈಲ್ ನಲ್ಲಿ ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದರು.

ಆದರೆ ಇದಕ್ಕೆ ಆಸ್ಪದವಾಗದಿದ್ದಾಗ ಅಲ್ಲಿಯೇ ಟೇಬಲ್ ಮೇಲಿದ್ದ ಲಿಯೋನೆಲ್ ಮೆಸ್ಸಿಯವರ ಪಾಸ್ ಪೋರ್ಟ್ ನ ಚಿತ್ರವನ್ನು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟಿದ್ದರು. ಈ ಕಾರಣಕ್ಕಾಗಿ ಆತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತಲ್ಲದೇ ಮೊಕದ್ದಮೆಯನ್ನೂ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಪೊಲೀಸ್ ಅಧಿಕಾರಿಗೆ ಒಂದು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...